ವಿಜಯಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ

ವಿಜಯಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ

 2020-21 ನೇ ಸಾಲಿನಲ್ಲಿ ವಿಜಯಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 07 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 20 ಅಂಗನವಾಡಿ ಕಾರ್ಯಕರ್ತೆ ಹಾಗೂ 114 ಅಂಗನಾಡಿ ಸಹಾಯಕಿಯರ ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಹಿಸುವ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ .

ಆಸಕ್ತಿ ಹೊಂದಿದ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನಿಗದಿತ ದಿನಾಂಕದೊಳಗಾಗಿ ಮಾತ್ರ ಅರ್ಜಿಗಳನ್ನು ಸಲ್ಲಿಸಲು ತಿಳಿಸಿದೆ . ಈ ಸಂಬಂಧ ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಲು ತಿಳಿಸಿದೆ .

ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಪ್ರಾರಂಭದ ದಿನಾಂಕ :- 01-03-2021

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :- 03-04-2021

Website www:-anganwadirecruit.kar.nic.in 

Notification Link click here

ವಿಜಯಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ

ವಿದ್ಯಾರ್ಹತೆ :- ಕಾರ್ಯಕರ್ತೆಯರಿಗೆ SSLC ಸಹಾಯಕಿಯರಿಗೆ ಕನಿಷ್ಟ 4ನೇ & ಗರಿಷ್ಟ 9ನೇ ತರಗತಿ ಉತ್ತೀರ್ಣ

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು

1 ) ಮಾಹಿತಿಯನ್ನು ಭರ್ತಿ ಮಾಡಿದ ಅರ್ಜಿ ( ಆನ್ ಲೈನ )

2 ) ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್ ಎಸ್ ಎಲ್ ಸಿ ಅಂಕಪಟ್ಟಿ

3 ) ತಹಶೀಲ್ದಾರರು / ಉಪ ತಹಶೀಲ್ದಾರರಿಂದ ಪಡೆದ 1 ವರ್ಷದೊಳಗಿನ ವಾಸಸ್ಥಳ ಧೃಡಿಕರಣ ಪತ್ರ

4 ) ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ ( ಕಾರ್ಯಕರ್ತೆ ಹುದ್ದೆಗೆ ಎಸ್ ಎಸ್ ಎಲ್ ಸಿ ಗಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿರುವರು , ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿದ ಅಂಕಪಟ್ಟಿಯನ್ನು ಲಗತ್ತಿಸುವುದು )

5 ) ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ ( ಸಹಾಯಕಿ ಹುದ್ದೆಗೆ ಕನೀಷ್ಠ 4 ನೇ ತರಗತಿ ತೇರ್ಗಡ , ಗರೀಷ್ಠ 9 ನೇ ತರಗತಿ ತೇರ್ಗಡೆಯ ಅಂಕಪಟ್ಟಿಯನ್ನು ಲಗತ್ತಿಸುವುದು )

6 ) ಮೀಸಲಾತಿ ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ

7 ) ಪತಿಯ ಮರಣ ಪ್ರಮಾಣ ಪತ್ರ ( ವಿಧವೆ ವೇತನದ ಧೃಡಿಕರಣವನ್ನು ಪರಿಗಣಿಸುವದಿಲ್ಲ . )

8 ) ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿ ಎಂದು ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ

9 ) ಅಂಗವಿಕಲತೆ ಪ್ರಮಾಣ ಪತ್ರ ( ದೈಹಿಕ ಅಂಗವಿಕಲತೆ ಶೇ 60 ಕ್ಕಿಂತ ಕಡಿಮೆ ಇದ್ದಲ್ಲಿ ಮಾತ್ರ ) ( ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ ಮಾತ್ರ ) ( ಅಂಗವಿಕಲ ವೇತನದ ಧೃಡಿಕರಣವನ್ನು ಪರಿಗಣಿಸುವದಿಲ್ಲ . )

10 ) ವಿಚ್ಛೇದನ ಪ್ರಮಾಣ ಪತ್ರ ನ್ಯಾಯಾಲಯದಿಂದ ಪಡೆದಿರಬೇಕು .

 11 ) ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯವರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ

12 ) ಪರಿತ್ಯಕ್ತಿ ಎಂಬ ಬಗ್ಗೆ ಗ್ರಾಮ ಪಂಚಾಯತಿಯಿಂದ ಪಡೆದ ಪ್ರಮಾಣ ಪತ್ರ

13 ) ಇಲಾಖೆಯ ಸುಧಾರಣೆ ಸಂಸ್ಥೆ / ರಾಜ್ಯ ಮಹಿಳಾ ನಿಲಯಗಳ ನಿವಾಸಿ ಎಂಬ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ ,

14 ) ಯೋಜನಾ ನಿರಾಶ್ರಿತ ಎಂಬ ಬಗ್ಗೆ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ

15 ) ಸ್ಥಳೀಯ ಸಂಸ್ಥೆಗಳ ಜನ ಪ್ರತಿನಿಧಿಯಾಗಿದ್ದಲ್ಲಿ ಕಾರ್ಯಕರ್ತೆ / ಸಹಾಯಕಿ ಹುದ್ದೆಗೆ ಆಯ್ಕೆ ಯಾದಲ್ಲಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕಿರುತ್ತದೆ . 

 

ಕರ್ನಾಟಕ ರಾಜ ಮನೆತನಗಳ ವಿಶೇಷಗಳು

ಪ್ರಮುಖ ಕೀರ್ತನೆಕಾರರು ಮತ್ತು ಅವರ ಅಂಕಿತನಾಮಗಳು

ಕರ್ನಾಟಕದ ಪ್ರಮುಖ ಪಾರ್ಕ್‌ಗಳು ಮತ್ತು ಅವುಗಳ ಸ್ಥಳಗಳು

 

Leave a Reply

Your email address will not be published. Required fields are marked *