basavanna vachanagalu, 100+ Basavanna Vachana in Kannada ಬಸವಣ್ಣನ ವಚನಗಳು kannada vachanagalu, basavannana famous vachanagalu, 50+ basavannana vachanagalu, ಬಸವಣ್ಣನ ವಚನಗಳು.
Basavanna Vachanagalu in Kannada
ಈ ಲೇಖನದಲ್ಲಿ ಬಸವಣ್ಣನವಚನಗಳನ್ನು ನೀಡಲಾಗಿದೆ ಇದು ಸಂಪೂರ್ಣವಾಗಿ ಉಚಿತವಾಗಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.
ಬಸವಣ್ಣ ನವರ ವಚನಗಳು
ಸ್ವಾಮಿ ನೀನು, ಶಾಶ್ವತ ನೀನು.
ಎತ್ತಿದೆ ಬಿರುದ ಜಗವೆಲ್ಲರಿಯಲು.
ಮಹಾದೇವ, ಮಹಾದೇವ!
ಇಲ್ಲಿಂದ ಮೇಲೆ ಶಬ್ದವಿಲ್ಲ!
ಪಶುಪತಿ ಜಗಕ್ಕೆ ಏಕೋದೇವ;
ಸ್ವರ್ಗಮರ್ತ್ಯ ಪಾತಾಳದೊಳಗೊಬ್ಬನೇ ದೇವ;
ಕೂಡಲಸಂಗಮದೇವ
ಅಯ್ಯಾ, ನಿಮ್ಮ ಶರಣನ ಮರ್ತ್ಯಕ್ಕೆ ತಂದೆಯಾಗಿ ನೆನೆನೆನೆದು
ಸುಖಿಯಾಗಿಯಾನು ಬದುಕಿದೆನಯ್ಯಾ.
ಅದೇನು ಕಾರಣ ತಂದೆಯಿಂದರಿದೆನಯ್ಯಾ. ಅರಿದರಿದು ನಿಮ್ಮ ಶರಣನು
ಆಚರಿಸುವಾಚರಣೆಯ ಕಂಡು ಕಣ್ದೆರೆದೆನಯ್ಯಾ ಕೂಡಲಸಂಗಮದೇವಾ.
ಸಂಸಾರವೆಂಬ ಸರ್ಪ ಮುಟ್ಟಲು
ಪಂಚೇಂದ್ರಿಯವಿಷಯವೆಂಬ
ವಿಷದಿಂದಾನು ಮುಂದುಗೆಟ್ಟೆನಯ್ಯ,
ಆನು ಹೊರಳಿ ಬೀಳುತ್ತಿದ್ದೆನಯ್ಯ;
‘ಓಂ ನಮಶ್ಶಿವಾಯ’ ಎಂಬ ಮಂತ್ರವ ಜಪಿಸುತ್ತಿದ್ದೆನಯ್ಯ
ಕೂಡಲಸಂಗಮದೇವ.
ಉಳ್ಳವರು ಶಿವಾಲಯ ಕಟ್ಟುವರು
ನಾನೇನು ಮಾಡಲಿ ಬಡವನಯ್ಯ!!
ಎನ್ನ ಕಾಲೇ ಕಂಬ, ದೇಹವೇ ದೇಗುಲ
ಶಿರವೇ ಹೊನ್ನ ಕಳಶವಯ್ಯ!!
ಕೂಡಲಸಂಗಮದೇವ ಕೇಳಯ್ಯ
ಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲ
ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ!
ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ!
ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ!
ಇದಾವ ಪರಿಯಲ್ಲಿ ಕಾಡಿತ್ತು ಮಾಯೆ
ಈ ಮಾಯೆಯ ಕಳೆವೊಡೆ ಯೆನ್ನಳವಲ್ಲ,
ನೀವೇ ಬಲ್ಲಿರಿ ಕೂಡಲಸಂಗಮದೇವಾ.
ಅಯ್ಯಾ ನೀನು ನಿರಾಕಾರವಾದಲ್ಲಿ
ನಾನು ಜ್ಞಾನವೆಂಬ ವಾಹನವಾಗಿದ್ದೆ ಕಾಣಾ.
ಅಯ್ಯಾ ನೀನು ನಾಂಟ್ಯಕ್ಕೆ ನಿಂದಲ್ಲಿ ನಾನು ಚೈತನ್ಯವೆಂಬ ವಾಹನವಾಗಿದ್ದೆ ಕಾಣಾ.
ಅಯ್ಯ ನೀನು ಸಾಕಾರವಾಗಿದ್ದಲ್ಲಿ ನಾನು ವೃಷಭನೆಂಬ ವಾಹನವಾಗಿದ್ದೆ ಕಾಣಾ.
ಅಯ್ಯಾ, ನೀನೆನ್ನ ಭವವ ಕೊಂದಹೆನೆಂದು ಜಂಗಮಲಾಂಛನವಾಗಿ ಬಂದಲ್ಲಿ
ನಾನು ಭಕ್ತನೆಂಬ ವಾಹನವಾಗಿದ್ದೆ ಕಾಣಾ ಕೂಡಲಸಂಗಮದೇವ.
ಮನವೇ ಸರ್ಪ, ತನುವೇ ಹೇಳಿಗೆ!
ಹಾವಿನೊಡತಣ ಹುದುವಾಳಿಗೆ!
ಇನ್ನಾವಾಗ ಕೊಂದಹುದೆಂದರಿಯೆ.
ಇನ್ನಾವಾಗ ತಿಂದಹುದೆಂದರಿಯೆ.
ನಿಚ್ಚಕ್ಕೆ ನಿಮ್ಮ ಪೂಜಿಸಬಲ್ಲಡೆ
ಅದೇ ಗಾರುಡ ಕೂಡಲಸಂಗಮದೇವ.
Basavanna Vachanagalu In Kannada
ಸಕ್ಕರೆಯ ಕೊಡನ ತುಂಬಿ
ಹೊರಗ ಸವಿದರೆ ರುಚಿಯುಂಟೆ ?
ತಕ್ಕೈಸಿ ಭುಜತುಂಬಿ,
ಲಿಂಗಸ್ಪರ್ಶನವ ಮಾಡದೆ,
ಅಕ್ಕಟಾ, ಸಂಸಾರ ವೃಥಾ ಹೋಯಿತ್ತಲ್ಲ!
ಅದೇತರ ಭಕ್ತಿ ? ಅದೇತರ ಯುಕ್ತಿ ? ಕೂಡಿಕೊ!
ಕೂಡಲಸಂಗಮದೇವ
ದಯವಿಲ್ಲದ ಧರ್ಮವಾವುದಯ್ಯಾ ?
ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ
ದಯವೇ ಧರ್ಮದ ಮೂಲವಯ್ಯೂ
ಕೂಡಲ ಸಂಗಯ್ಯನಂತಲ್ಲದೊಲ್ಲನಯ್ಯೂ !!
ಎನ್ನ ಮನವೆಂಬ ಮರ್ಕಟನು ತನುವಿಕಾರವೆಂಬ ಅಲ್ಪಸುಖದಾಸೆ ಮಾಡಿ,
ವೃಥಾ ಭ್ರಮಣಗೊಂಡು, ನಾನಾ ದೆಸೆಗೆ ಲಂಘಿಸಿ ಅಳಲಿಸಿ ಬಳಲಿಸುತ್ತಿದೆ ನೋಡಾ.
ಕೂಡಲಸಂಗಮದೇವರೆಂಬ ವೃಕ್ಷಕ್ಕೆ ಲಂಘಿಸಿ
ಅಪರಿಮಿತ ಸುಖವನೆಯ್ದದು ನೋಡಾ.
Basavanna Vachana in Kannada
ಆನು ಒಬ್ಬನು; ಸುಡುವರೈವರು.
ಮೇಲೆ ಕಿಚ್ಚು ಘನ, ನಿಲಲು ಬಾರದು.
ಕಾಡುಬಸವನ ಹುಲಿ ಕೊಂಡೊಯ್ದರೆ
ಆರೈಯಲಾಗದೆ ಕೂಡಲಸಂಗಮದೇವ ?
ಬಸವಣ್ಣನ ವಚನಗಳು
ಕಳ್ಳ ನಾಗರ ಕಂಡರೆ ಹಾಲನೆರೆ ಎಂಬುದು
ದಿಟದ ನಾಗರ ಕೊಲ್ಲೆಂಬರಯ್ಯ
ಉಂಬ ಜಂಗಮ ಬಂದರೆ ನಡೆಯೆಂಬುದು
ಉಣ್ಣದ ಲಿಂಗಕ್ಕೆ ಬೋನವ ಹಿಡಿಯೆಂಬರು
ನಮ್ಮ ಕೂಡಲಸಂಗನ ಶರಣರ ಕಂಡು
ಉದಾಸೀನವ ಮಾಡಿದರೆ
ಕಲ್ಲತಾಗಿದ ಮಿಟ್ಟಿಯಂತಪ್ಪರಯ್ಯ
ವಚನದ ಹುಸಿ-ನುಸುಳೆಂತು ಮಾಬುದೆನ್ನ.
ಮನದ ಮರ್ಕಟತನವೆಂತು ಮಾಬುದೆನ್ನ.
ಹೃದಯದ ಕಲ್ಮಷವೆಂತು ಮಾಬುದೆನ್ನ.
ಕಾಯವಿಕಾರಕ್ಕೆ ತರಿಸಲುವೋದೆನು.
ಎನಗಿದು ವಿಧಿಯೇ, ಕೂಡಲಸಂಗಮದೇವ.
ಬಸವಣ್ಣನವರ ವಚನಗಳು ಕನ್ನಡ
ಮಡಕೆಯ ಮಾಡುವಡೆ ಮಣ್ಣೇ ಮೊದಲು,
ತೊಡಿಗೆಯ ಮಾಡುವಡೆ ಹೊನ್ನೇ ಮೊದಲು,
ಶಿವಪಥವನರಿವಡೆ ಗುರುಪಾದವೇ ಮೊದಲು
ಕೂಡಲಸಂಗಮದೇವನರಿವಡೆ ಶರಣರ ಸಂಗವೇ ಮೊದಲು.
ಚಂದ್ರಮನಂತೆ ಕಳೆ ಸಮನಿಸಿತ್ತೆನಗೆ
ಸಂಸಾರವೆಂಬ ರಾಹು ಸರ್ವಗ್ರಾಸಿಯಾಗಿ ನುಂಗಿತ್ತಯ್ಯ,
ಇಂದೆನ್ನ ದೇಹಕ್ಕೆ ಗ್ರಹಣವಾಯಿತ್ತು.
ಇನ್ನೆಂದಿಂಗೆ ಮೋಕ್ಷವಹುದೋ.
ಇತರೆ ಸ್ಪೂರ್ತಿ ಮಾತುಗಳು
- ಸ್ನೇಹದ ನುಡಿಮುತ್ತುಗಳು
- ಕನ್ನಡ ನುಡಿಮುತ್ತುಗಳು
- ಜೀವನದ ಹಿತನುಡಿಗಳು
- ಗುಡ್ ಮಾರ್ನಿಂಗ್ ಕನ್ನಡ ಕವನಗಳು
- ಕನ್ನಡ ಪ್ರೀತಿಯ ಕವನಗಳು
- ಶುಭ ಮುಂಜಾನೆ ಸಂದೇಶಗಳು
- ಗುಡ್ ಮಾರ್ನಿಂಗ್ ಕನ್ನಡ ಕವನಗಳು
- ಹೂವುಗಳ ಹೆಸರು ಕನ್ನಡ
- ಹೊಸ ಮನೆ ಹೆಸರುಗಳು
- ಹುಡುಗರ ಹೆಸರುಗಳು
- ಹುಡುಗಿಯರ ಹೆಸರುಗಳು
- ಪ್ರಾಣಿಗಳ ಹೆಸರು ಕನ್ನಡ