basavanna vachanagalu in kannada, ಬಸವಣ್ಣನವರ 10 ವಚನಗಳು, ಬಸವಣ್ಣನವರ ವಚನಗಳು pdf, ಬಸವಣ್ಣನವರ ವಚನಗಳು pdf, ಬಸವಣ್ಣನವರ ವಚನಗಳು ಕನ್ನಡದಲ್ಲಿ, ಬಸವಣ್ಣನವರ ವಚನಗಳು ಇನ್ ಕನ್ನಡ, basavannanavara vachana in kannada, basavannanavara vachana, ಬಸವಣ್ಣನವರ ವಚನ ಕನ್ನಡ
Basavanna Vachanagalu In Kannada
ಒಲೆ ಹತ್ತಿ ಉರಿದಡೆ ನಿಲಬಹುದಲ್ಲದೆಧರೆ ಹತ್ತಿ ಉರಿದಡೆ ನಿಲಲುಬಾರದು.ಏರಿ ನೀರುಂಬಡೆ, ಬೇಲಿ ಕೆಯ್ಯ ಮೇವಡೆ,ನಾರಿ ತನ್ನ ಮನೆಯಲ್ಲಿ ಕಳುವಡೆ,ತಾಯ ಮೊಲೆವಾಲು ನಂಜಾಗಿ ಕೊಲುವಡೆ,ಇನ್ನಾರಿಗೆ ದೂರುವೆ ಕೂಡಲಸಂಗಮದೇವಾ !
ಎನ್ನ ನಡೆಯೊಂದು ಪರಿ, ಎನ್ನ ನುಡಿಯೊಂದು ಪರಿ,ಎನ್ನೊಳಗೇನೂ ಶುದ್ಧವಿಲ್ಲ ನೋಡಯ್ಯಾ.ನುಡಿಗೆ ತಕ್ಕ ನಡೆಯ ಕಂಡಡೆಕೂಡಲಸಂಗಮದೇವನೊಳಗಿಪ್ಪನಯ್ಯಾ.
ಸುಡಲೀ ಮನವೆನ್ನನುಡುಹನ ಮಾಡಿತ್ತು,ನಡೆವಲ್ಲಿ ನುಡಿವಲ್ಲಿ ಅಧಿಕನೆಂದೆನಿಸಿತ್ತು.ಬೆಡಗಿನ ಕೀಲು ಕಳೆದು ಕೆಡೆದ ಬಳಿಕಕಡುಗೂರ್ಪ ಮಡದಿ ತಾ ಮುಟ್ಟಲಮ್ಮಳು,ಒಡಲನುರಿಕೊಂಬುದು, ಒಡವೆಯನರಸ ಕೊಂಬ,ಕಡುಗೂರ್ಪ ಮಡದಿಯ ಮತ್ತೊಬ್ಬ ಚೆನ್ನಿಗ ಕೊಂಬಮುನ್ನ ಮಾಡಿದುದು ತನ್ನ ಬೆನ್ನ ಬಿಡದನ್ನಕ್ಕ,ಇನ್ನು ಮಾಡಿದರಳವೆ ಕೂಡಲಸಂಗಮದೇವಾ.
ಬೆಳೆಯ ಭೂಮಿಯಲೊಂದು ಪ್ರಳಯದ ಕಸ ಹುಟ್ಟಿತಿಳಿಯಲೀಯದು, ಎಚ್ಚರಲೀಯದು.ಎನ್ನವಗುಣವೆಂಬ ಕಸವ ಕಿತ್ತು ಸಲಹಯ್ಯಾ, ಲಿಂಗತಂದೆಸುಳಿದೆಗೆದು ಬೆಳೆವೆನು ಕೂಡಲಸಂಗಮದೇವಾ.
ಅಡವಿಯೊಳಗೆ ಹೊಲಬುಗೆಟ್ಟ ಪಶುವಿನಂತೆಅಂಬೆ ಅಂಬೆ' ಎಂದು ಕರೆವುತ್ತಲಿದ್ದೇನೆ,
ಅಂಬೆ ಅಂಬೆ’ ಎಂದು ಒರಲುತ್ತಲಿದ್ದೇನೆ,ಕೂಡಲಸಂಗಮದೇವ `ಬಾಳು ಬಾಳೆಂಬನ್ನಕ್ಕ.
ಅಯ್ಯಾ, ಅಯ್ಯಾ, ಎಂದು ಕರೆವುತ್ತಲಿದ್ದೇನೆ.ಅಯ್ಯಾ, ಅಯ್ಯಾ, ಎಂದು ಒರಲುತ್ತಲಿದ್ದೇನೆ.ಓ ಎನ್ನಲಾಗದೆ ಅಯ್ಯಾಆಗಳೂ ನಿಮ್ಮ ಕರೆವುತ್ತಲಿದ್ದೇನೆಮೋನವೇ ಕೂಡಲಸಂಗಮದೇವಾ.
ಲೋಕದ ಡೊಂಕ ನೀವೇಕೆ ತಿದ್ದುವಿರಿನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ;ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ.ನೆರೆಮನೆಯ ದಃಖಕ್ಕೆ ಅಳುವವರ ಮೆಚ್ಚಕೂಡಲಸಂಗಮದೇವ.
ತನು ಮನ ಧನವ ಹಿಂದಿಕ್ಕಿಕೊಂಡುಮಾತಿನ ಬಣಬೆಯ ಮುಂದಿಟ್ಟುಕೊಂಡುಒಳಲೊಟೆಯ ನುಡಿವವರು ನೀವೆಲ್ಲರೂ ಕೇಳಿರೆ.ತಲಹಿಲ್ಲದ ಕೋಲು ಹೊಳ್ಳು ಹಾರುಹುದಲ್ಲದೆಗುರಿಯ ತಾಗಬಲ್ಲುದೆಮಾಯಾಪಾಶ ಹಿಂಗಿ, ಮನದ ಗಂಟು ಬಿಡದನ್ನಕ್ಕಕೂಡಲಸಂಗಮದೇವನೆಂತೊಲಿವನಯ್ಯಾ
ಹಸಿದು ಬಂದ ಗಂಡಂಗೆ ಉಣಲಿಕ್ಕದೆ,ಬಡವಾದನೆಂದು ಮರುಗುವ ಸತಿಯ ಸ್ನೆಹದಂತೆಬಂದುದನರಿಯಳು, ಇದ್ದುದ ಸವಸಳು.ದುಃಖವಿಲ್ಲದ ಅಕ್ಕೆ ಹಗರಣಿಗನ ತೆರನಂತೆಕೂಡಲಸಂಗಮದೇವಾ.
ಕಂಡ ಭಕ್ತರಿಗೆ ಕೈಮುಗಿಯುವಾತನೆ ಭಕ್ತ,ಮೃದುವಚನವೆ ಸಕಲ ಜಪಂಗಳಯ್ಯಾ,ಮೃದುವಚನವೆ ಸಕಲ ತಪಂಗಳಯ್ಯಾ,ಸದುವಿನಯವೆ ಸದಾಶಿವನ ಒಲುಮೆಯಯ್ಯಾ.ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ.
ಹಾಲ ತೊರೆಗೆ ಬೆಲ್ಲದ ಕೆಸರು, ಸಕ್ಕರೆಯ ಮಳಲು,ತವರಾಜದ ನೊರೆ ತೆರೆಯಂತೆ ಆದ್ಯರ ವಚನವಿರಲು,ಬೇರೆ ಬಾವಿಯ ತೋಡಿ ಉಪ್ಪನೀರನುಂಬವನ ವಿಧಿಯಂತೆಆುತ್ತೆನ್ನ ಮತಿ, ಕೂಡಲಸಂಗಮದೇವಾ.
basavannanavara vachana in kannada
ಇತರೆ ವಿಷಯಗಳು
ಚನ್ನ ಬಸವಣ್ಣನವರ ಜೀವನ ಚರಿತ್ರೆ ಕನ್ನಡ