kannada rajyotsava speech in kannada , ಕನ್ನಡ ರಾಜ್ಯೋತ್ಸವ ಮೇಲೆ ಕನ್ನಡ ಪ್ರಬಂಧ , ಕನ್ನಡ ರಾಜ್ಯೋತ್ಸವದ ಬಗ್ಗೆ ಪ್ರಬಂಧ , kannada rajyotsava essay , ಕನ್ನಡ ರಾಜ್ಯೋತ್ಸವ ಭಾಷಣ 2023
Kanada Rajyotsava Speech in Kannada ಕನ್ನಡ ರಾಜ್ಯೋತ್ಸವ ಭಾಷಣ

kannada rajyotsava essay in kannada
ಕರ್ನಾಟಕ ಪದದ ಮೂಲದ ಬಗ್ಗೆ ಹಲವು ಅಭಿಪ್ರಾಯಗಳಿದ್ದರೂ ಸಾಮಾನ್ಯವಾಗಿ “ಕರು” ಮತ್ತು “ನಾಡು” ಸೇರಿ “ಎತ್ತರದ ಭೂಮಿ” ಎಂಬರ್ಥದ ಕರುನಾಡು ಪದದಿಂದ ಉಗಮವಾಗಿದೆ ಎನ್ನಲಾಗಿದೆ.
ಕರ್ನಾಟಕ ರಾಜ್ಯೋತ್ಸವ
ಕರು ಎಂದರೆ ಕಪ್ಪು, ಮಣ್ಣಿನ , ನಾಡು ಎಂದರೆ ಪ್ರದೇಶ ಎಂದು ಅರ್ಥೈಸಿಕೊಂಡರೆ ಬಯಲು ಸೀಮೆಯ ಕಂಡು ಕಪ್ಪು ಹತ್ತಿ ಮಣ್ಣಿನಿಂದಾಗಿ ಹೆಸರು ಬಂದಿದೆ ಎಂದೂ ಹೇಳಲಾಗುತ್ತದೆ. ಕೃಷ್ಣಾ ನದಿಯ ದಕ್ಷಿಣಕ್ಕೆ ಎರಡೂ ಕಡೆ ಜಲಾವೃತವಾದ ಪ್ರದೇಶವಾದ್ದರಿಂದ ಬ್ರಿಟಿಷರ ಕಾಲದಲ್ಲಿ ಕಾರ್ನಾಟಿಕ್ ಅಥವಾ ಕರ್ನಾಟಕ ಹೆಸರು ಬಳಕೆಗೆ ಬಂತು.
ಕನ್ನಡ ರಾಜ್ಯೋತ್ಸವದ ಮಹತ್ವ
kanada rajyotsava ಕನ್ನಡ ರಾಜ್ಯೋತ್ಸವ ಭಾಷಣ
ಕನ್ನಡದ ಇತಿಹಾಸ, ಮಹತ್ವ, ಹೋರಾಟಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಹಾಗೂ ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ಮಹನೀಯರನ್ನು ಸ್ಮರಿಸುವ ಉದ್ದೇಶದಿಂದ ಕನ್ನಡ ರಾಜ್ಯೋತ್ಸವ ಅತ್ಯಂತ ಮಹತ್ವವನ್ನು ಪಡೆದುಕೊಂಡಿದೆ.
Kanada Rajyotsava Essay In Kannada
ಅಲ್ಲದೇ ನಾಡಿಗಾಗಿ, ಕನ್ನಡಕ್ಕಾಗಿ ದುಡಿದ ಮಹನೀಯರಿಗೆ ಈ ಮಾಸದಲ್ಲಿ ರಾಜ್ಯ ಸರ್ಕಾರ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳು ಗೌರವಿಸುವ ಮೂಲಕ, ನಾಡಿನ ಸೇವೆಯನ್ನು ಮುಂದುವರೆಸಲು ಇನ್ನಷ್ಟು ಪ್ರೇರಣೆ ನೀಡಿದಂತಾಗುತ್ತದೆ. ಕನ್ನಡ ನಾಡಿನ ಮಹತ್ವವನ್ನು ಕನ್ನಡಿಗರು ಅರಿತಾಗ ಮಾತ್ರ ಕನ್ನಡ ರಾಜ್ಯೋತ್ಸವದ ಆಚರಣೆ ಸಾರ್ಥಕವಾಗುತ್ತದೆ.
ಕರ್ನಾಟಕ ರಾಜ್ಯೋತ್ಸವ ಭಾಷಣ
ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾಯರು, ಕರ್ನಾಟಕ ಏಕೀಕರಣ ಚಳುವಳಿಯನ್ನು 1905 ರಲ್ಲಿ ಪ್ರಾರಂಭಿಸಿದರು. 1950 ರಲ್ಲಿ, ಭಾರತವು ಗಣರಾಜ್ಯವಾದ ನಂತರ ಭಾರತದ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪ ಗೊಂಡವು. ಈ ಹಿಂದೆ ರಾಜರ ಆಳ್ವಿಕೆಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಸಂಸ್ಥಾನಗಳನ್ನು ಒಳಗೊಂಡಂತೆ ರಾಜ್ಯಗಳು ರೂಪುಗೊಂಡಿದ್ದವು. ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯವು ಉದಯವಾಯಿತು.
1956 ರ ನವೆಂಬರ್ 1 ರಂದು, ಮದ್ರಾಸ್, ಮುಂಬಯ್, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪು ಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.
ಕನ್ನಡ ಭಾಷಣ ವಿಷಯಗಳು
Kanada Rajyotsava Images In Kannada

ಹೊಸದಾಗಿ ಏಕೀಕೃತಗೊಂಡ ರಾಜ್ಯದ ಆರಂಭದಲ್ಲಿ ಹೊಸ ಘಟಕದ ಕೋರ್ ರೂಪುಗೊಂಡು ಮುಂಚಿನ ರಾಜ್ಯದ ಹೆಸರು ಇರಲೆಂದು “ಮೈಸೂರು” ಹೆಸರನ್ನು ಉಚಿಸಿಕೊಂಡರು. ಆದರೆ ಉತ್ತರ ಕರ್ನಾಟಕದ ಜನರ ತರ್ಕ ಮಾನ್ಯತೆಗಾಗಿ, ರಾಜ್ಯದ ಹೆಸರು ನವೆಂಬರ್ 1, 1973 ರಂದು “ಕರ್ನಾಟಕ” ಎಂದು ಬದಲಾಯಿತು.
ಈ ಸಂದರ್ಭದಲ್ಲಿ ದೇವರಾಜ ಅರಸ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಕರ್ನಾಟಕ ಏಕೀಕರಣದ ಮನ್ನಣೆ ಇತರ ವ್ಯಕ್ತಿಗಳಿಗೂ ಸೇರುತ್ತದೆ. ಅವರೆಂದರೆ ಅನಕೃ, ಕೆ. ಶಿವರಾಮ ಕಾರಂತ,ಕುವೆಂಪು,ಮಾಸ್ತಿ ವೆಂಕಟೇಶ ಅಯ್ಯಂಗಾರ್ ಎ.ಎನ್.ಕೃಷ್ಣರಾವ್ ಮತ್ತು ಬಿ.ಎಂ.ಶ್ರೀಕಂಠಯ್ಯ
ಕರ್ನಾಟಕ ಹೆಸರು ಬಂದದ್ದು ಹೇಗೆ?

ಕನ್ನಡ ರಾಜ್ಯೋತ್ಸವ ನುಡಿಮುತ್ತುಗಳು
ಕನ್ನಡ ರಾಜ್ಯೋತ್ಸವ ಪ್ರಬಂಧ
ಕರ್ನಾಟಕ ಪದದ ಮೂಲ ಸಂಸ್ಕೃತ, ಸಂಸ್ಕೃತದ ಕನ್ನಡ ಎಂಬ ಪದದಿಂದ ಕರ್ನಾಟಕ ಹುಟ್ಟಿದೆ. ಕನ್ನಡಿಗರ ನಾಡು ಕನ್ನಾಡು, ಕನ್ನಡ ನಾಡು ಎಂಬುದು ಇದರ ಅರ್ಥ.ಆದರೆ ಕರ್ನಾಟಕ ಎಂಬ ಪದದ ಹುಟ್ಟು ಅಥವಾ ಅರ್ಥದ ಬಗ್ಗೆ ಇನ್ನೂ ಹಲವು ಅಭಿಪ್ರಾಯಗಳೂ ಇದೆ. ಕರು+ ನಾಡು= ಕರುನಾಡು ಎಂಬ ಪದವು ಕರ್ನಾಟಕವಾಯಿತು ಎನ್ನಲಾಗುತ್ತದೆ.
ಕರು ಎಂದರೆ ಕಪ್ಪು, ಇದರರ್ಥ ಕಪ್ಪು ಮಣ್ಣಿನ ನಾಡು ಎಂದೂ ಸಹ ಹೇಳಲಾಗುತ್ತದೆ. ಹಳೆಯ ಗ್ರಂಥಗಳು ಇದನ್ನು ಕರ್ನಾಟ ಎಂಬ ಪದದಿಂದ ಪಡೆಯಲಾಗಿದೆ ಎಂದು ಸೂಚಿಸುತ್ತವೆ, ಕೆಲವು ಮೂಲಗಳು ಕರ್ನಾಟಕವನ್ನು ಎತ್ತರದ ಭೂಮಿಗೆ ಅನುವಾದಿಸುತ್ತದೆ.
ಉತ್ತರ ಕರ್ನಾಟಕ ಜನತೆಯ ಮಾನ್ಯತೆಗಾಗಿ ಮೈಸೂರು ಎಂಬ ಹೆಸರಿನ ಬದಲು ಕರ್ನಾಟಕ ಎಂದು ಮರುನಾಮಕರಣ ಮಾಡಬೇಕು ಎಂದು 1972 ರ ಜುಲೈನಲ್ಲಿ ಈ ಬಗ್ಗೆ ಚರ್ಚೆ ಭುಗಿಲೆದ್ದಿತು. ಸಾಕಷ್ಟು ದೀರ್ಘಾವಧಿಯ ಚರ್ಚೆಗಳ ನಂತರ ರಾಜ್ಯ ವಿಧಾನಸಭೆಯಲ್ಲೂ ಇದಕ್ಕೆ ಸರ್ವಾನುಮತದಿಂದ ಅನುಮತಿ ದೊರೆಯಿತು ನಂತರ ಕರ್ನಾಟಕವಾಯಿತು.
Kannada Rajyotsava Wishes in Kannada




ಕನ್ನಡ ರಾಜ್ಯೋತ್ಸವ ಮೇಲೆ ಕನ್ನಡ ಪ್ರಬಂಧ
ಇತರೆ ಪ್ರಬಂಧಗಳನ್ನು ಓದಿ
- ನರೇಂದ್ರ ಮೋದಿ ಅವರ ಜೀವನ ಚರಿತ್ರೆ ಕನ್ನಡ
- ಬಸವಣ್ಣನವರ ಜೀವನ ಚರಿತ್ರೆ ಕನ್ನಡ
- ಕೆ ಪಿ ಪೂರ್ಣಚಂದ್ರ ತೇಜಸ್ವಿ ಜೀವನ ಚರಿತ್ರೆ
- ಅಂಬೇಡ್ಕರ್ ಬಗ್ಗೆ ಮಾಹಿತಿ
- ಮದರ್ ತೆರೇಸಾ ಮಾಹಿತಿ
- ಮಾಲಿನ್ಯದ ಕುರಿತು ಪ್ರಬಂಧ
- ವಿನಾಯಕ ದಾಮೋದರ ಸಾವರ್ಕರ್