Kanakadasa Jayanthi Wishes in Kannada , kanakadasa jayanthi quotes in kannada , kanakadasa jayanthi shubhashayagalu , happy kanakadasa jayanthi in kannada
Kanakadasa Jayanthi Wishes in Kannada
ಕನಕದಾಸರ ಜಯಂತಿಯ ಶುಭಾಶಯಗಳನ್ನು ಈ ಲೇಖನದಲ್ಲಿ ನೀಡಲಾಗಿದ್ದು ಈ ಚಿತ್ರಗಳನ್ನು ನೀವು ದೀರ್ಘವಾಗಿ ಒತ್ತಿ ಹಿಡಿದುಕೊಳ್ಳುವುದರ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು.
Kanakadasa Jayanthi Shubhashayagalu
ನೀ ಮಾಯೆಯೊಳಗೋ ನಿನ್ನೊಳು ಮಾಯೆಯೋ
ನೀ ಮಾಯೆಯೊಳಗೊ, ನಿನ್ನೊಳು ಮಾಯೆಯೊ
ನೀ ದೇಹದೊಳಗೊ, ನಿನ್ನೊಳು ದೇಹವೂ
ಕುಸುಮದೊಳು ಗಂಧವೊ, ಗಂಧದೊಳು ಕುಸುಮವೊ
ಕುಸುಮ ಗಂಧಗಳೆರಡು ಘ್ರಾಣದೊಳಗೊ
ಅಸಮಭವ ಕಾಗಿನೆಲೆಯಾದಿಕೇಶವರಾಯ
ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೆ
ಕನಕದಾಸ ಜಯಂತಿಯ ಶುಭಾಶಯಗಳು
ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ
ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ
ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ
ಒಡಲು ಹಸಿಯಲು ಅನ್ನವಿಲ್ಲದಲೇ ಇರಬಹುದು
ಪಡೆದ ಕ್ಷೇತ್ರವ ಬಿಟ್ಟು ಹೊರಡಬಹುದು
ಮಡದಿ ಮಕ್ಕಳನೆಲ್ಲಾ ತೊಲಗಿಸಿ ಬಿಡಬಹುದು
ಕಡಲೊಡೆಯ ನಿನ್ನ ಅರೆಘಳಿಗೆ ಬಿಡಲಾಗದು
ತಾಯಿ ತಂದೆಯ ಬಿಟ್ಟು ತಪವ ಮಾಡಲೂ ಬಹುದು
ದಾಯಾದಿ ಬಂಧುಗಳ ಬಿಡಲೂ ಬಹುದು
ರಾಯ ತಾ ಮುನಿದರೆ ರಾಜ್ಯವನೇ ಬಿಡಬಹುದು
ಕಾಯಜ ಪಿತ ನಿನ್ನ ಅರೆಘಳಿಗೆ ಬಿಡಲಾಗದು
ಪ್ರಾಣವ ಪರರು ಬೇಡಿದರೆತ್ತಿ ಕೊಡಬಹುದು
ಮಾನದಲಿ ಮನವ ತಗ್ಗಿಸಬಹುದು
ಜಾಣ ನಾಯಕನಾದ ಆದಿಕೇಶವರಾಯ
ಜಾಣ ಶ್ರೀಕೃಷ್ಣಾ ನಿನ್ನ ಅರೆಘಳಿಗೆ ಬಿಡಲಾಗ
ಬಯಲು ಆಲಯದೊಳಗೊ, ಆಲಯವು ಬಯಲೊಳಗೊ
ಬಯಲು ಆಲಯವೆರಡು ನಯನದೊಳಗೊ
ನಯನ ಬುದ್ಧಿಯೊಳಗೊ, ಬುದ್ಧಿ ನಯನದೊಳಗೊ
ನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ
ಕನಕದಾಸರ ಜಯಂತಿಯ ಶುಭಾಶಯಗಳು
ಸವಿಯು ಸಕ್ಕರೆಯೊಳಗೊ, ಸಕ್ಕರೆಯು ಸವಿಯೊಳಗೊ
ಸವಿಯು ಸಕ್ಕರೆಯೆರಡು ಜಿಹ್ವೆಯೊಳಗೊ
ಜಿಹ್ವೆ ಮನಸಿನೊಳಗೊ, ಮನಸು ಜಿಹ್ವೆಯೊಳಗೊ
ಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ
ಕನಕದಾಸ ಜಯಂತಿಯ ಶುಭಾಶಯಗಳು
ಇವುಗಳನ್ನು ಓದಿ
- ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು
- ದೀಪಾವಳಿ ಹಬ್ಬದ ಶುಭಾಶಯಗಳು
- ಗೌರಿ ಗಣೇಶ ಹಬ್ಬದ ಶುಭಾಶಯಗಳು
- ಗಣೇಶ ಚತುರ್ಥಿ ಹಬ್ಬದ ಶುಭಾಶಯಗಳು
- ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು