ಹಣೆಬರಹ
ಒಂದಾನೊಂದು ಕಾಲದಲ್ಲಿ ಸುವರ್ಣಗಿರಿ ಎಂಬ ರಾಜ್ಯದಲ್ಲಿ ‘ ಚಂದ್ರಸೇನನೆಂಬ ರಾಜನು ಆಳುತ್ತಿದ್ದನು . ಆತನು ದಾನ , ಧರ್ಮ , ಪೂಜೆ ಪುನಸ್ಕಾರಗಳಿಗೆ ಪ್ರಖ್ಯಾತನಾಗಿದ್ದನು .
‘ ನನ್ನ ರಾಜ್ಯದಲ್ಲಿ ಬಡವರೇ ಇರಬಾರದು . ಎಲ್ಲರೂ ಸುಖ ಸೌಭಾಗ್ಯಗಳಿಂದ ಕೂಡಿರಬೇಕು ‘ ಎಂಬ ಭಾವನೆ ಹೊಂದಿ ತನ್ನ ಪ್ರಜೆಗಳನ್ನು ಮಕ್ಕಳಿಗಿಂತ ಹೆಚ್ಚಾಗಿ ಕಾಣುತ್ತಿದ್ದನು . ಆಗಾಗ ಸಂಜೆಯ ವೇಳೆ ಮಂತ್ರಿ ಸುಗುಣಾನಂದನೊಡನೆ ವಾಯು ವಿಹಾರಕ್ಕೆ ಹೋಗುತ್ತಿದ್ದನು .
kannada kathegalu
ಒಂದು ದಿನ ಹೀಗೆ ಹೋಗುತ್ತಿರುವಾಗ ಸಂಜೆ ಮುಗಿದು ಕತ್ತಲಾಗುತ್ತ ಬಂತು . “ ಮಂತ್ರಿಗಳೇ ಬೇಗ ರಾಜಧಾನಿ ಸೇರೋಣ . ಕುದುರೆಯನ್ನು ವೇಗವಾಗಿ ಓಡಿಸಿ ‘ ಎಂದು ಸೂಚಿಸಿದನು .
ಕೊಂಚ ದೂರ ಹೋಗುವುದರಲ್ಲಿ ರಾಜನು ಕುದುರೆಯನ್ನು ನಿಲ್ಲಿಸಿ ‘ ಮಂತ್ರಿಗಳೇ ಕತ್ತಲಾಗುತ್ತಾ ಬಂದಿದ್ದರೂ ಕುಟೀರದ ಮುಂದೆ ತೋಟದ ಕೆಲಸ ಮಾಡುತ್ತಿರುವ ವಿಪ್ರ ಯಾರು ? ತುಂಡುಬಟ್ಟೆ ಉಟ್ಟು ಚಳಿಯನ್ನು ಲೆಕ್ಕಿಸದ ಆ ಮಹಾ ಪುರುಷ ಯಾರು ‘ ಎಂದು ಕೇಳಿದರು .
ಆಗ ಮಂತ್ರಿಯು ಆತ ಶೇಷ ಶರ್ಮನೆಂಬ ಪ್ರಖಾಂಡ ಪಂಡಿತ , ಶ್ರಮಜೀವಿ ಎಂದರು . “ ನಮ್ಮ ರಾಜ್ಯದಲ್ಲಿ ಆತ ಏಕೆ ಇಷ್ಟು ಕಷ್ಟಪಡಬೇಕು ಅರಮನೆಗೆ ಕರೆಸಿ ಬೇಕಾದ್ದನ್ನು ಕೊಡಿ ‘ ಎಂದನು . `
ಕ್ಷಮಿಸಿ ಮಹಾರಾಜ ಆತ ಮಹಾ ಆತ್ಮ ಗೌರವಿ , ಯಾರಿಂದ ಏನೂ ಬೇಡುವುದಿಲ್ಲ . ಯಾರ ಸಹಾಯವನ್ನೂ ಬಯಸುವುದಿಲ್ಲ . ಕಾಯಕ ಮಾಡಿ ಹೆಂಡತಿ ಮಕ್ಕಳನ್ನು ಪೋಷಿಸುತ್ತಿದ್ದಾನೆ ‘ ಎಂದು ಉತ್ತರಿಸಿದನು ಮಂತ್ರಿ .
ಸರಿ ನಡೆಯಿರಿ ಇದಕ್ಕೆ ನಾವೇ ಒಂದು ಉಪಾಯ ಮಾಡೋಣ ‘ ಎಂದು ಇಬ್ಬರೂ ಹೊರಟರು . ಮಾರನೆಯ ದಿನ ಶೇಷ ಶರ್ಮನ ತೋಟದಲ್ಲಿ ಒಂದು ಚೀಲ ಸಿಕ್ಕಿತು . ಅದರ ತುಂಬಾ ಚಿನ್ನದ ನಾಣ್ಯಗಳಿದ್ದವು .
kannada kathegalu
ಕೂಡಲೆ ಆತ ಅದನ್ನು ಕೈಯಲ್ಲಿ ಹಿಡಿದು ರಾಜ ದರ್ಬಾರಿಗೆ ನಡೆದ ‘ ಮಹಾ ಪ್ರಭು ನನ್ನ ತೋಟದಲ್ಲಿ ಚಿನ್ನದ ನಾಣ್ಯಗಳಿರುವ ಈ ಚೀಲ ಸಿಕ್ಕಿದೆ , ಯಾರದೋ ಏನೋ ವಿಚಾರಣೆ ನಡೆಸಿ ಅವರಿಗೆ ತಲುಪಿಸಿ ಎಂದು ಹೇಳಿ ಹೊರಡಲನುವಾದ
ಆಗ ರಾಜನು ‘ ಅದು ಯಾರದೇ ಆಗಲಿ , ನಿಮ್ಮ ತೋಟದಲ್ಲಿ ಸಿಕ್ಕಿದೆ . ನೀವೇ ಅನುಭವಿಸಿ ‘ ಎಂದನು . ಆಗ ಶೇಷ ಶರ್ಮ ‘ ಕ್ಷಮಿಸಿ ಮಹಾ ಪ್ರಭು , ನಿತ್ಯ ನನ್ನ ತೋಟಕ್ಕೆ ಅನೇಕ ಹಕ್ಕಿಗಳು ಬರುತ್ತವೆ .
ನವಿಲು , ಜಿಂಕೆಗಳು ಬರುತ್ತವೆ . ಅವು ನಮ್ಮದೆಂದರೆ ದ್ರೋಹವಾಗುವುದಿಲ್ಲವೆ ? ಅನೇಕ ಮಂದಿ ದಾರಿಹೋಕರು ನಮ್ಮ ತೋಟದ ಹಣ್ಣು ಹಂಪಲು ತಿಂದು ಹೋಗುತ್ತಾರೆ .
ಅವರು ನಮ್ಮವರಾಗುತ್ತಾರೆ ? ಕ್ಷಮಿಸಿ ಆ ಹಣ ಯಾರದೋ ಅವರಿಗೆ ಕೊಡಿ ‘ ಎಂದನು . ‘ ನಮ್ಮ ಹಣೆಯಲ್ಲಿ ಬರೆದಿರುವಷ್ಟು ನಮಗೆ ಸಿಕ್ಕಿದೆ . ನಾನು ಅದರಿಂದ ಸುಖವಾಗಿದ್ದೇನೆ ‘
ಎಂದು ವಂದಿಸಿ ಕುಟೀರಕ್ಕೆ ತೆರಳಿದನು . ಮಂತ್ರಿ ` ಪ್ರಭು ಹಣೆಬರಹ ಬದಲಾಯಿಸಲು ಬರೆದ ಆ ಬ್ರಹ್ಮನಿಂದಲೇ ಸಾಧ್ಯವಿಲ್ಲ ಎಂದನು .
10th kannada | sslc multiple choice questions in kannada | sslc mcq questions