ಕನ್ನಡ ರಾಜ್ಯೋತ್ಸವ 2023 | Kannada Rajyotsava Speech in Kannada

Kannada Rajyotsava Speech in Kannada No1 Free Bhashana | ಕರ್ನಾಟಕ ರಾಜ್ಯೋತ್ಸವ ಭಾಷಣ ಕನ್ನಡ

Kannada Rajyotsava Speech in Kannada , kannada rajyotsava bhashana , kannada rajyotsava bhashana , karnataka rajyotsava shubhashayagalu, ಕನ್ನಡ ಭಾಷಣ ವಿಷಯಗಳು, ಕನ್ನಡ ರಾಜ್ಯೋತ್ಸವ ಪ್ರಬಂಧ, ಕನ್ನಡ ರಾಜ್ಯೋತ್ಸವ ಭಾಷಣ 2023 pdf

Kannada Rajyotsava Speech in Kannada 2023

ಈ ಲೇಖನದಲ್ಲಿ ಕನ್ನಡ ರಾಜೋತ್ಸವದ ಪ್ರಬಂಧ ನೀಡಲಾಗಿದೆ.

ಕನ್ನಡ ರಾಜ್ಯೋತ್ಸವದ ಇತಿಹಾಸ ವಿವರಣೆ:

Spardhavani Telegram

ಕಲಿಯೋಕೆ ಕೋಟಿಭಾಷೆ, ಆಡೋಕೆ ಒಂದೆ ಭಾಷೆ ಕನ್ನಡ ಕನ್ನಡ ಕಸ್ತೂರಿ ಕನ್ನಡ, ಎಲ್ಲರಿಗೂ ಕರ್ನಾಟಕ
ರಾಜ್ಯೋತ್ಸವದ ಶುಭಾಶಯಗಳು.

ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾಯರು, ಕರ್ನಾಟಕ ಏಕೀಕರಣ ಚಳುವಳಿಯನ್ನು 1905 ರಲ್ಲಿ ಪ್ರಾರಂಭಿಸಿದರು. 1950 ರಲ್ಲಿ, ಭಾರತವು ಗಣರಾಜ್ಯವಾದ ನಂತರ ಭಾರತದ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪ ಗೊಂಡವು. ಈ ಹಿಂದೆ ರಾಜರ ಆಳ್ವಿಕೆಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಸಂಸ್ಥಾನಗಳನ್ನು ಒಳಗೊಂಡಂತೆ ರಾಜ್ಯಗಳು ರೂಪುಗೊಂಡಿದ್ದವು. ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯವು ಉದಯವಾಯಿತು.

1956 ರ ನವೆಂಬರ್ 1 ರಂದು, ಮದ್ರಾಸ್, ಮುಂಬಯ್, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪು ಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.

ಕನ್ನಡ ಭಾಷಣ ವಿಷಯಗಳು

ಕನ್ನಡ ರಾಜ್ಯೋತ್ಸವ 2023
ಕನ್ನಡ ರಾಜ್ಯೋತ್ಸವ 2023

ಹೊಸದಾಗಿ ಏಕೀಕೃತಗೊಂಡ ರಾಜ್ಯದ ಆರಂಭದಲ್ಲಿ ಹೊಸ ಘಟಕದ ಕೋರ್ ರೂಪುಗೊಂಡು ಮುಂಚಿನ ರಾಜ್ಯದ ಹೆಸರು ಇರಲೆಂದು “ಮೈಸೂರು” ಹೆಸರನ್ನು ಉಚಿಸಿಕೊಂಡರು. ಆದರೆ ಉತ್ತರ ಕರ್ನಾಟಕದ ಜನರ ತರ್ಕ ಮಾನ್ಯತೆಗಾಗಿ, ರಾಜ್ಯದ ಹೆಸರು ನವೆಂಬರ್ 1, 1973 ರಂದು “ಕರ್ನಾಟಕ” ಎಂದು ಬದಲಾಯಿತು.

ಈ ಸಂದರ್ಭದಲ್ಲಿ ದೇವರಾಜ ಅರಸ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಕರ್ನಾಟಕ ಏಕೀಕರಣದ ಮನ್ನಣೆ ಇತರ ವ್ಯಕ್ತಿಗಳಿಗೂ ಸೇರುತ್ತದೆ. ಅವರೆಂದರೆ ಅನಕೃ, ಕೆ. ಶಿವರಾಮ ಕಾರಂತ,ಕುವೆಂಪು,ಮಾಸ್ತಿ ವೆಂಕಟೇಶ ಅಯ್ಯಂಗಾರ್‌ ಎ.ಎನ್.ಕೃಷ್ಣರಾವ್ ಮತ್ತು ಬಿ.ಎಂ.ಶ್ರೀಕಂಠಯ್ಯ

ಕರ್ನಾಟಕ ಹೆಸರು ಬಂದದ್ದು ಹೇಗೆ?

Kannada Rajyotsava Speech in Kannada No1 Free Bhashana | ಕರ್ನಾಟಕ ರಾಜ್ಯೋತ್ಸವ ಭಾಷಣ ಕನ್ನಡ
Kannada Rajyotsava Speech in Kannada No1 Free Bhashana | ಕರ್ನಾಟಕ ರಾಜ್ಯೋತ್ಸವ ಭಾಷಣ ಕನ್ನಡ

ಕನ್ನಡ ರಾಜ್ಯೋತ್ಸವ ಪ್ರಬಂಧ

ಕರ್ನಾಟಕ ಪದದ ಮೂಲ ಸಂಸ್ಕೃತ, ಸಂಸ್ಕೃತದ ಕನ್ನಡ ಎಂಬ ಪದದಿಂದ ಕರ್ನಾಟಕ ಹುಟ್ಟಿದೆ. ಕನ್ನಡಿಗರ ನಾಡು ಕನ್ನಾಡು, ಕನ್ನಡ ನಾಡು ಎಂಬುದು ಇದರ ಅರ್ಥ.ಆದರೆ ಕರ್ನಾಟಕ ಎಂಬ ಪದದ ಹುಟ್ಟು ಅಥವಾ ಅರ್ಥದ ಬಗ್ಗೆ ಇನ್ನೂ ಹಲವು ಅಭಿಪ್ರಾಯಗಳೂ ಇದೆ. ಕರು+ ನಾಡು= ಕರುನಾಡು ಎಂಬ ಪದವು ಕರ್ನಾಟಕವಾಯಿತು ಎನ್ನಲಾಗುತ್ತದೆ.

ಕರು ಎಂದರೆ ಕಪ್ಪು, ಇದರರ್ಥ ಕಪ್ಪು ಮಣ್ಣಿನ ನಾಡು ಎಂದೂ ಸಹ ಹೇಳಲಾಗುತ್ತದೆ. ಹಳೆಯ ಗ್ರಂಥಗಳು ಇದನ್ನು ಕರ್ನಾಟ ಎಂಬ ಪದದಿಂದ ಪಡೆಯಲಾಗಿದೆ ಎಂದು ಸೂಚಿಸುತ್ತವೆ, ಕೆಲವು ಮೂಲಗಳು ಕರ್ನಾಟಕವನ್ನು ಎತ್ತರದ ಭೂಮಿಗೆ ಅನುವಾದಿಸುತ್ತದೆ.

ಉತ್ತರ ಕರ್ನಾಟಕ ಜನತೆಯ ಮಾನ್ಯತೆಗಾಗಿ ಮೈಸೂರು ಎಂಬ ಹೆಸರಿನ ಬದಲು ಕರ್ನಾಟಕ ಎಂದು ಮರುನಾಮಕರಣ ಮಾಡಬೇಕು ಎಂದು 1972 ರ ಜುಲೈನಲ್ಲಿ ಈ ಬಗ್ಗೆ ಚರ್ಚೆ ಭುಗಿಲೆದ್ದಿತು. ಸಾಕಷ್ಟು ದೀರ್ಘಾವಧಿಯ ಚರ್ಚೆಗಳ ನಂತರ ರಾಜ್ಯ ವಿಧಾನಸಭೆಯಲ್ಲೂ ಇದಕ್ಕೆ ಸರ್ವಾನುಮತದಿಂದ ಅನುಮತಿ ದೊರೆಯಿತು ನಂತರ ಕರ್ನಾಟಕವಾಯಿತು.

ಕನ್ನಡ ಬಾವುಟ:

ಕರ್ನಾಟಕಕ್ಕೆ ತನ್ನದೇ ಆದ ಪ್ರತ್ಯೇಕ ಭಾವುಟವಿದೆ. ಕನ್ನಡಕ್ಕೊಂದು ಭಾವುಟ ಅವಶ್ಯಕತೆಯನ್ನು ಅರಿತ ಕನ್ನಡದ ಹೋರಾಟಗಾರರಾದ ಎಂ.ರಾಮಮೂರ್ತಿಗಳು ಹಳದಿ ಹಾಗೂ ಕೆಂಪು ಬಣ್ಣ ಬಳಸಿ ಬಾವುಟವನ್ನು ಸಿದ್ದಪಡಿಸಿದರು. ಮೂಲತಃ ಹಳದಿ ಬಣ್ಣವು ಕನ್ನಡಾಂಬೇಯ ಆರಿಶಿನ ಮತ್ತು ಕುಂಕುಮವನ್ನು ಸೂಚಿಸುತ್ತದೆ ಹಾಗೂ ಹಳದಿ ಬಣ್ಣವು ಶಾಂತಿ, ಸೌಹಾರ್ದತೆ ಸೂಚಿಸಿದರೆ ಕೆಂಪು ಬಣ್ಣ ಕ್ರಾಂತಿಯ ಸಂದೇಶ ನೀಡುತ್ತದೆ.

ಆರಂಭದಲ್ಲಿ ಕನ್ನಡ ಬಾವುಟ ಸಿದ್ಧಗೊಂಡಾಗ ಬಾವುಟದ ಮಧ್ಯೆ ಕರ್ನಾಟಕದ ಭೂಪಟ ಮತ್ತು ಅದರ ನಡುವಿನಲ್ಲಿ ಏಳು ಕವಲುಗಳುಳ್ಳ ತೆನೆಯ ಚಿತ್ರವಿತ್ತು. ಮುದ್ರಿಸಲು ಸ್ವಲ್ಪ ಕಷ್ಟವಾಗುತ್ತಿದ್ದರಿಂದ ಅದನ್ನು ತೆಗೆದು ಕೇವಲ ಹಳದಿ ಮತ್ತು ಕೆಂಪು ಬಣ್ಣವನ್ನು ಮಾತ್ರ ಉಳಿಸಿಕೊಳ್ಳಲಾಯಿತು.

Kannada Rajyotsava Speech in Kannada No1 Free Bhashana | ಕರ್ನಾಟಕ ರಾಜ್ಯೋತ್ಸವ ಭಾಷಣ ಕನ್ನಡ
Kannada Rajyotsava Speech in Kannada No1 Free Bhashana | ಕರ್ನಾಟಕ ರಾಜ್ಯೋತ್ಸವ ಭಾಷಣ ಕನ್ನಡ

FAQ

ವಿಶಾಲ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರು ಬಂದ ವರ್ಷ

1956

ಕರ್ನಾಟಕ ಏಕೀಕರಣಗೊಂಡ ವರ್ಷ

1973

ಉಪಸಂಹಾರ

ರಾಜ್ಯೋತ್ಸವವನ್ನು ಕರ್ನಾಟಕದಲ್ಲಿರುವ ಬಹುತೇಕ ಹಿಂದೂಗಳು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಧರ್ಮಬೇಧವಿಲ್ಲದೆ ಆಚರಿಸುತ್ತಾರೆ ಹಾಗೂ ಕರ್ನಾಟಕದಲ್ಲಿರುವ ಆಟೋ ರಿಕ್ಷಾಗಳು ಮತ್ತು ಇತರೆ ವಾಹನಗಳು ಕನ್ನಡ ಧ್ವಜದ ಬಣ್ಣಗಳಾದ ಕೆಂಪು ಮತ್ತು ಹಳದಿ ವರ್ಣಗಳ ಬಾವುಟದೊಂದಿಗೆ ಅಲಂಕರಿಸಲಾಗಿರುತ್ತವೆ. ರಾಜ್ಯ ಸರ್ಕಾರ ಕರ್ನಾಟಕ ರಾಜ್ಯೋತ್ಸವದ ದಿನ ಸಾಧನೆ ಮಾಡಿದ ವ್ಯಕ್ತಿಗೆ ಸನ್ಮಾನ ಮಾಡಿ ಗೌರವಿಸಲಾಗುತ್ತದೆ.

ಇತರೆ ಪ್ರಬಂಧಗಳನ್ನು ಓದಿ

Leave a Reply

Your email address will not be published. Required fields are marked *