kuvempu in kannada, ಕುವೆಂಪು ಅವರ ಜೀವನ ಚರಿತ್ರೆ ಪ್ರಬಂಧ , B ಕೆ.ವಿ. ಪುಟ್ಟಪ್ಪ, kuvempu information and biography in Kannada, kavi parichaya, kuvempu information in kannada
Kuvempu In Kannada
ಕುವೆಂಪು ಅವರ ಜೀವನ ಚರಿತ್ರೆ ಪ್ರಬಂಧವನ್ನು ಈ ಲೇಖನದಲ್ಲಿ ಮಾಹಿತಿಯನ್ನು ನೀಡಲಾಗಿದ್ದು ಇದು ಸಂಪೂರ್ಣವಾಗಿ ಉಚಿತವಾಗಿದೆ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.
ಕುವೆಂಪು ಅವರ ಜೀವನ ಚರಿತ್ರೆ ಪ್ರಬಂಧ
ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ ‘ಯುಗದ ಕವಿ ಜಗದ ಕವಿ’ ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ ‘ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು.
Kuvempu Information In Kannada
ಕುವೆಂಪು ಅವರ ಜೀವನ ಮತ್ತು ಸಾಧನೆಗಳು
ಕುವೆಂಪು ರವರ ಪೂರ್ಣ ಹೆಸರು : (ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ)
ತಂದೆ : ವೆಂಕಟಪ್ಪಗೌಡ
ತಾಯಿ : ಸೀತಮ್ಮ
ಜನನ : ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿಯಲ್ಲಿ 29-12-1904 ರಲ್ಲಿ ಜನಿಸಿದರು.
ವಿದ್ಯಾಭ್ಯಾಸ : 1916 ರಲ್ಲಿ ಮನೆಯಲ್ಲೇ ಖಾಸಗಿ ಮೇಷ್ಟರ ಮೂಲಕ ಪ್ರಾರಂಭಿಕ ವಿದ್ಯಾಭ್ಯಾಸ
ನಂತರ ತೀರ್ಥಹಳ್ಳಿಯಲ್ಲಿ ವಿದ್ಯಾಭ್ಯಾಸ ಮುಗಿಸಿ ಮೈಸೂರಿನಲ್ಲಿ ವೆಸ್ಲಿಯನ್ ಮಿಷನ್ ಹೈಸ್ಕೂಲ್, ಮಹಾರಾಜ ಕಾಲೇಜುಗಳಲ್ಲಿ ಓದಿ 1929 ರಲ್ಲಿ ಎಂ.ಎ. ಪದವಿ ಗಳಿಸಿದರು.
kuvempu in kannada
1929ರಲ್ಲಿ ಮೈಸೂರು ಮಹಾರಾಜ ಕಾಲೇಜಿನಲ್ಲಿ ಅಧ್ಯಾಪಕರಾಗಿ ಅನಂತರ ಕ್ರಮೇಣ ಉಪಪ್ರಾಧ್ಯಾಪಕ, ಪ್ರಿನ್ಸಿಪಾಲರಾಗಿ 1956ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾಗಿ ಸೇವೆ ಸಲ್ಲಿಸಿ 1960ರಲ್ಲಿ ನಿವೃತ್ತರಾದರು.
ಕುವೆಂಪು ಬಾಲ್ಯದಿಂದಲೂ ಸಾಹಿತ್ಯ ರಚನೆಯಲ್ಲಿ ನಿರತರಾಗಿದ್ದರು.
ಅವರು ಕನ್ನಡಕ್ಕೆ ನೀಡಿದ ಕೊಡುಗೆಗಳಿಗಾಗಿ ಕನ್ನಡದ ಸಾಹಿತ್ಯಗಳನ್ನು ರಚಿಸಿದ್ದಕ್ಕಾಗಿ ಅವರಿಗೆ ಅನೇಕ ಮನ್ನಣೆ ಪ್ರಶಸ್ತಿಗಳು ದೊರೆತವು.
Kuvempu Biography in Kannada
ಮೈಸೂರಿನಲ್ಲಿ ನಡೆದ 38ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತಾಧ್ಯಕ್ಷರಾದರು.
ಧಾರವಾಡದಲ್ಲಿ 1975ರಲ್ಲಿ ನಡೆದ 39ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದರು.
ರಾಷ್ಟ್ರಪತಿಗಳಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದರು.
ರಾಜ್ಯಸರ್ಕಾರದಿಂದ ರಾಷ್ಟ್ರಕವಿ ಪ್ರಶಸ್ತಿಯನ್ನೂ, ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನೂ ಪಡೆದರು.
ಕುವೆಂಪು ಕವಿ ಪರಿಚಯ
ಬೆಂಗಳೂರು ವಿಶ್ವವಿದ್ಯಾನಿಲದಿಂದ 1969ರಲ್ಲಿ ಗೌರವ ಡಾಕ್ಟರೇಟ್ ಲಭಿಸಿತು.
ಪಂಪ ಪ್ರಶಸ್ತಿ, ಕರ್ನಾಟಕ ರತ್ನ ಪ್ರಶಸ್ತಿ, ರಾಷ್ಟ್ರಕವಿ ಪ್ರಶಸ್ತಿಗಳು ಕುವೆಂಪು ಅವರ ದೈತ್ಯಸಾಹಿತ್ಯ ಪ್ರತಿಭೆಗೆ ಸಿಕ್ಕ ಪುರಸ್ಕಾರಗಳಾಗಿವೆ.
1969ರಲ್ಲಿ ಶ್ರೀರಾಮಾಯಣ ದರ್ಶನಂ ಕೃತಿಗೆ ಜ್ಞಾನಪೀಠ ಪ್ರಶಸ್ತಿ ಲಭಿಸಿತು.
ಇದು ಕನ್ನಡದಲ್ಲಿ ಮೊದಲ ಜ್ಞಾನಪೀಠ ಪ್ರಶಸ್ತಿ ಆಗಿದೆ.
1995ರಲ್ಲಿ ನಾಡೋಜ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರ ನೀಡಲಾಯಿತು.
kuvempu information in kannada
1985ರಲ್ಲಿ ಮೈಸೂರಿನಲ್ಲಿ ನಡೆದ ಮೊದಲನೇ ವಿಶ್ವಕನ್ನಡ ಸಮ್ಮೇಳನವನ್ನು ಉದ್ಘಾಟಿಸಿದರು.
ಅಪಾರ ಅನುಪಮ ಸಾಹಿತ್ಯ ರಚನೆ ಮಾಡಿದ್ದ ಕುವೆಂಪು ಅವರು, ಕವನ ಸಂಕಲನ, ಖಂಡಕಾವ್ಯ, ಮಹಾಕಾವ್ಯಗಳನ್ನು ರಚಿಸಿದರು.
ಅನುವಾದಿತ ಮತ್ತು ಸ್ವತಂತ್ರ ನಾಟಕಗಳನ್ನು ಬರೆದರು.
ಕಾದಂಬರಿ, ಕಥೆ, ಗದ್ಯಚಿತ್ರ. ಆತ್ಮಚರಿತ್ರೆ, ಭಾಷಾಂತರ ಗ್ರಂಥಗಳನ್ನು ರಚಿಸಿದರು.
ಮಾಸ್ತಿ ಜತೆ ಕರ್ಣಾಟಕ ಭಾರತ ಕಥಾಮಂಜರಿಯನ್ನು ಸಂಪಾದಿಸಿದ್ದಾರೆ.
kuvempu avara kavi parichaya kannada
ಕುವೆಂಪು ಅವರ ಮೊದಲ ಕೃತಿ
ಶ್ರೀರಾಮಯಣ ದರ್ಶನಂ
ಕುವೆಂಪು ಅವರ ಕೃತಿಗಳು ಕನ್ನಡದಲ್ಲಿ
ಕಬ್ಬಿಗನ ಕೈಬುಟ್ಟಿ
ಮಲೆಗಳಲ್ಲಿ ಮದುಮಗಳು
ಕಾನೂರು ಹೆಗ್ಗಡತಿ
ವಿಚಾರ ಕ್ರಾಂತಿಗೆ ಆಹ್ವಾನ
ಬೆರಳ್ಗೆ ಕೊರಳ್ಶೂ
ದ್ರತಪಸ್ವಿ
ಸ್ವಾಮಿ ವಿವೇಕಾನಂದ
ಚಿತ್ರಾಂಗದಾ
ಪಾಂಚಜನ್ಯ
ಬೊಮ್ಮನಹಳ್ಳ್ಳಿ ಕಿಂದರಿಜೋಗಿ
ಕೊಳಲು ಇತ್ಯಾದಿ.
ರಾಷ್ಟ್ರಕವಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾಗಿದ್ದ ಕುವೆಂಪು ಅವರು 11-11-1994 ರಲ್ಲಿ ಮೈಸೂರಿನಲ್ಲಿ ನಿಧನರಾದರು.
ಉಪಸಂಹಾರ
ಈ ಲೇಖನದಲ್ಲಿ ಕುವೆಂಪುರವರ ಜೀವನ ಸೇರಿದಂತೆ ಅವರ ಕೃತಿಗಳು ಮತ್ತು ಅವರ ಆತ್ಮ ಕಥನ ಸೇರಿದಂತೆ ಇತರೆ ಎಲ್ಲ ವಿಷಯಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ಹಾಗೆ ಶಾಲಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಬಂದ ಬರೆಯಲು ಉಪಯುಕ್ತ ಆಗುವ ಎಲ್ಲ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿದ್ದೇವೆ ನೀವು ಇದರ ಸದುಪಯೋಗ ಪಡೆದುಕೊಂಡು ನಿಮ್ಮ ಗೆಳೆಯ ಗೆಳೆತಿಯರಿಗೆ ಶೇರ್ ಮಾಡುವ ಮೂಲಕ ನಮಗೆ ಇನ್ನಷ್ಟು ಉತ್ತಮ ಮಾಹಿತಿಯನ್ನು ಹೊತ್ತು ತರುವುದಕ್ಕೆ ಸಹಕಾರಿ ಆಗುತ್ತದೆ.
ಕುವೆಂಪು ಅವರ ಮಾಹಿತಿ ಜೀವನಚರಿತ್ರೆ
FAQ
ಕುವೆಂಪುರವರ ಪೂರ್ಣ ಹೆಸರೇನು?
ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ
ಕುವೆಂಪು ಅವರ ಆತ್ಮಕಥೆ ಯಾವುದು?
ನೆನಪಿನ ದೋಣಿಯಲ್ಲಿ
ಇತರೆ ವಿಷಯಗಳನ್ನು ಓದಲು ಈ ಕೆಳಗೆ ಕಾಣಿಸುವ ವಿಷಯದಮೇಲೆ ಕ್ಲಿಕ್ ಮಾಡಿ