proverbs in kannada, gadegalu in kannada, gadhe mathugalu in kannada, ಗಾದೆ ಮಾತುಗಳು ಕನ್ನಡ, ಕನ್ನಡ ಜನಪ್ರಿಯ ಗಾದೆಗಳು, Kannada gadegalu with explanation in kannada, ಕನ್ನಡ ಗಾದೆಗಳು pdf, proverbs in kannada bible, proverbs in kannada with explanation, proverbs in kannada for students, proverbs in kannada with pictures
Proverbs In Kannada
ನಮ್ಮ ಟೆಲಿಗ್ರಾಮ್ ಗ್ರೂಪ್ ಗೆ ಈಗಲೇ ಜಾಯಿನ್ ಆಗಿ

- ಅಶ್ವಿನೀ ಸಸ್ಯನಾಶಿನೀ.
- ಭರಣಿ ಮಳೆ ಧರಣಿ ಬೆಳೆ.
- ರೋಹಿಣಿ ಮಳೆ ಓಣಿಯೆಲ್ಲಾ ಕೆಸರು
- ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ.
- ಆದರೆ ಆರಿದ್ರಾ ಇಲ್ವಾದ್ರೆ ದರಿದ್ರ!
- ಹಸ್ತ ಇಲ್ದಿದ್ರೆ ಒಕ್ಕಲಿಗ ಹಲ್ಲು ಕಿಸ್ದ.
- ಸ್ವಾತಿ ಮಳೆ ಮುತ್ತಿನ ಬೆಳೆ.
- ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.
- ಅನುರಾಧ ಬಂದರೆ ನಮ್ಮ ರಾಗಿ ನಮ್ಮದು.
- ಚಿತ್ತಾ ಮಳೆ ವಿಚಿತ್ರ ಬೆಳೆ!
- ಪೂರ್ವಾಷಾಢ-ಉತ್ತರಾಷಾಢ ಬೇಡವೇ ಬೇಡ.

- ಬಾಡಿಗೆ ಎತ್ತು ಅಂತ ಹೊಡಿದು ಬಡಿಬಾರದು.
- ಆಕಳಿಲ್ಲದವ ಬೆಳೆಸು ಮಾಡ್ಯಾನ, ಆಕಳಿದ್ದವ ಮಕ್ಕಳ ಸಾಕ್ಯಾನ.
- ಉಣಬೇಕು- ಉಡಬೇಕು ಎಂಬೋದಾದ್ರೆ ಎಮ್ಮೆ ಕಟ್ಟಬೇಕು.
- ಬಾಳೆ ಬೆಳೆದವ ಬಾ
- ಕೃತಿ ಇಲ್ಲದ ಮಾತು ಕಸ ಬೆಳೆದ ತೋಟವಿದ್ದಂತೆ.
- ಚಿಂತೆ ಮಾಡಿದರೆ ಸಂತೆ ಸಾಗೀತೆ?
- ದುಡ್ಡನ್ನು ಕಾದಿಟ್ಟುಕೊಳ್ಳದವನು ಹಣವಂತನು ಹೇಗೆ ಆದಾನು?
- ಮಕ್ಕಳ ಬಾಯಿಗೆ ಹಣ್ಣು ಕೊಟ್ಟು ಮಣ್ಣು ಬಿಡಿಸು.
- ತಾಯಿ ಬೇಕು ಇಲ್ಲವೇ ಬಾಯಿ ಬೇಕು.
- ಸೀರಿಗೇಡಿಗೆ ಸೀರೆ ಉಡಿಸಿದರೆ ಕೆರಿ ದಂಡಿ ಮ್ಯಾಗ ನಿಂತು ಕೇಕೆ ಹಾಕಿದಳು.
- ಪೀತಾಂಬರ ಉಟ್ಟರೂ ಕೊತ್ತಂಬರಿ ಮಾರೋದು ತಪ್ಪಲಿಲ್ಲ.
- ಪೇಚಾಟದಲ್ಲಿ ಬಿದ್ದವನಿಗೆ ಪೀಕಲಾಟವೇ ಗತಿ.
- ಹಾರುವನ ತೊತ್ತಾಗಬೇಡ ಗಾಣಿಗನ ಎತ್ತಾಗಬೇಡ.
- ಮಂತ್ರಕ್ಕಿಂತ ಉಗುಳೇ ಹೆಚ್ಚು.
- ಹಂಪಿಗೆ ಹೋಗುವುದಕ್ಕಿಂತ ಕೊಂಪೆಯಲ್ಲಿರುವುದೇ ಲೇಸು.
- ಸಾಲ್ಗಾರ ಸುಮ್ಮನಿದ್ರು ಸಾಕ್ಷಿಗಾರ ಸುಮ್ಮನಿರ.
- ಹಲ್ಲಿರುವ ತನಕ ಊಟ ಕಣ್ಣಿರುವ ತನಕ ನೋಟ.
- ದಕ್ಷಿಣೆಗಾದರೆ ಮಾತು ಹಿಡಿದಾನು, ಮಂತ್ರಕ್ಕಾದರೆ ಬೆನ್ನು ತೋರ್ಸಿಯಾನು.
- ಭಾವಿಸಿದರೆ ಬಳಗ, ಕೂಡಿಸಿದರೆ ಕಾಸು.
- ಭಾಷೆ ಕೊಟ್ಟವನು ಪೋಷಣೆ ಮಾಡನೇ?
- ಭಾಷೆ ತಿಳಿಯದಿದ್ದರೂ ಹಾಸ್ಯಕ್ಕೆ ಕಡಿಮೆಯಿಲ್ಲ.
- ಭಿಕಾರಿಯಾದವ ಕಾಶಿಗೆ ಹೋದರೂ, ಭಿಕ್ಷಾನ್ನವಲ್ಲದೆ ಪಕ್ವಾನ್ನ ಉಂಡಾನೇ?
- ಮಣದಷ್ಟು ಮಾತಿಗಿಂತ ಕಣದಷ್ಟು ಕೆಲಸ ಲೇಸು.
- ಮಳೆ ನೀರನ್ನು ಬಿಟ್ಟು ಮಂಜಿನ ನೀರಿಗೆ ಕೈಯೊಡ್ಡಿದ ಹಾಗೆ.
- ದುಡಿಯೋ ತನಕ ಮಡದಿ.
- ದೂರವಿದ್ದ ಮಗನಿಗೂ, ಹತ್ತಿರವಿದ್ದ ಮಗನಿಗೂ ಸರಿಬಾರದು.
- ದೊಂಬರಾಟ ಆಡಬಹುದು ಮಕ್ಕಳಾಟ ಆಡೊಕ್ಕಾಗಲ್ಲ.
- ನನಗೆ ನಿನಗೆ ಹಿತ ಇಲ್ಲ, ನಿನ್ನ ಬಿಟ್ಟು ನನಗೆ ಗತಿ ಇಲ್ಲ ಎಂದಂತೆ.
- ನೆಂಟ್ರು ಮನೆಗೆ ಮೂಲ, ಕುಂಟೆತ್ತು ಹೊಲಕ್ಕೆ ಮೂಲ.
- ನರಗುಂದಕ್ಕೆ ಹೊದರೆ ಕುರು ತಪ್ಪೀತೆ?
- ನಾಮವಿದ್ದವನಿಗೆ ಕಾಮ ಕಡಿಮೆಯೇ?
- ಹಲ್ಲಿ ಶಕುನ ಕೇಳಿ ಕಲ್ಲಿಂದ ಹೊಡೆಸಿಕೊಂಡಂತೆ.
- ಸಾಲಗಾರನ ಹೆಂಡತಿ ಶೋಕಿಮಾಡಿದರೇನು?
- ವೈಕುಂಠಕ್ಕೆ ಹೋಗಲಿಕ್ಕೆ ಕುಂಟು ದಾಸಯ್ಯನ ಮಧ್ಯಸ್ತಿಕೆಯೇ?
- ಮೂರು ಕಾಸಿನ ಮಾಂಸವಿಲ್ಲದಿದ್ದರೂ, ಮಾತು ಮಾತ್ರ ಜೋರು.
- ರೊಕ್ಕ ಕೊಟ್ಟು ರಟ್ಟೆ ಮುರಿಸಿಕೊಂಡಂತೆ
- ಜಾತಿ ನೀತಿಯಿಲ್ಲ, ಮಾರಿಗೆ ಕರುಣೆ ಇಲ್ಲ.
- ಹೂಡಿದರೆ ಒಲೆ, ಮಡಿದರೆ ಮನೆ.
- ಹತ್ತು ಜನರ ಹುಲ್ಲು ಕಡ್ಡಿ ಒಬ್ಬನಿಗೆ ತಲೆ ಹೊರೆ.
- ಪಂಗಡವಾದವ ಸಂಗಡ ಬಂದಾನೆ?
- ಅಗ್ನಿಗೆ ತಂಪುಂಟೆ, ವಿಷಕ್ಕೆ ರುಚಿಯುಂಟೆ, ದಾರಿಕೋರನಿಗೆ ಧರ್ಮವುಂಟೆ?
- ಬಸವನ ಹಿಂದೆ ಬಾಲ, ಲಗ್ನದ ಹಿಂದೆ ಸಾಲ.
- ತುಪ್ಪ ತಿಂದ ಮಾತಿಗಷ್ಟು ತಪ್ಪು ಮಾತು ಬಂತು.
- ತೇರಾದ ಮೇಲೆ ಜಾತ್ರೆ ಸೇರಿತು.

- ಆಸೆಗೆ ತಕ್ಕ ಪರಿಶ್ರಮ ಬೇಕು.
- ಎಲ್ಲರಿಗೂ ಹಿಡಿಸುವ ಸಂಪ್ರದಾಯ ಯಾವುದೂ ಇಲ್ಲ.
- ಏನಾದರೂ ಆಗು ಮೊದಲು ಮಾನವನಾಗು.
- ಬಕ್ಕಳ ಹೊನ್ನಿದ್ದರೆ ಊರೆಲ್ಲಾ ನೆಂಟರು.
- ಕಷ್ಟಗಳು ಹೇಳದೆ ಕೇಳದೆ ಬರೋ ನೆಂಟರ ಹಾಗೆ.
- ಕರ್ಪೂರವ ತಿಪ್ಪೇಲಿಟ್ರೂ ತನ್ನ ಸುವಾಸನೆ ಬಿಡದು.
- ಗಣೇಶನ್ನ ಮಾಡು ಅಂದ್ರೆ ಅವರ ಅಪ್ಪನ ಮಾಡಿದನಂತೆ.
- ಜ್ಞಾನಿ ಬಂದರೆ ಗೌರವಿಸು, ಹೀನ ಬಂದರೆ ತ್ಯಜಿಸು.
- ಸಂತೋಷವೇ ಯೌವನ, ಚಿಂತೆಯೇ ಮುಪ್ಪು
- ಹಸಿದವರ ಮುಂದೆ ಭಾಷಣ ಮಾಡಿದ ಹಾಗೆ.
- ಹಳೆಯ ಕೋಟು ಧರಿಸಿ, ಹೊಸ ಪುಸ್ತಕ ಕೊಳ್ಳಿ.
- ಊಟಕ್ಕೆ ಮೊದಲು ಉಪ್ಪಿನ ಕಾಯಿ, ಮಾತಿಗೆ ಮೊದಲು ಗಾದೆ.
- ಆರಿದ್ರೆ ಮಳೆಯಲ್ಲಿ ಆದವನೇ ಒಡೆಯ.
- ಸ್ವಾತಿ ಮಳೆ ಬಿದ್ರೆ ಮುತ್ತಿನಂಥ ಜೋಳ.
- ಕುಲ ಬಿಟ್ಟರೂ ಛಲ ಬಿಡಬೇಡ.
- ಹೊಸ ಮಂಜು ಹಳೆಯದನ್ನು ಕೊಚ್ಚದಿದ್ದೀತೆ.
- . ಕೆಟ್ಟದಲ್ಲದ ಮೇಲೆ ಪಿಸುಗುಟ್ಟೋದು ಯಾಕೆ?
- ಇಬ್ಬರು ಒಪ್ತಾರೆ ಮೂವರು ವಿರೋಧಿಸುತ್ತಾರೆ ಎಂದಂತೆ!
- ಮನೇಲಿ ಕತ್ತಲೆ, ಪರರಿಗೆ ದೀಪ ದಾನ ಮಾಡಿದ.
- ಇರೋದು ಕಲಿಸುತ್ತೆ, ಇಲ್ಲದ್ದು ನಾಚಿಸುತ್ತೆ.
- ಒಬ್ಬನ ಗಡ್ಡಕ್ಕೆ ಬೆಂಕಿ ಹತ್ತಿದಾಗ, ಮತ್ತೊಬ್ಬ ಕೈ ಕಾಯಿಸಿದ.
- ಮನೆಯೊಡತಿ ಮುಖದ ಮೇಲೆ ಉಗುಳಿದರೂ ಹೊರಗೆ ಬಂದು ನಾನು ಬೆವತಿದ್ದೇನೆ ಅಂದಂತೆ!
- ಹುಲಿ ಹಸಿದಾಗ ಹುಲ್ಲು ತಿಂದೀತೆ?
- ಎಡಗಣ್ಣು ಹೊಡೆದರೆ ನಾರಿಗೆ ಶುಭ.
- ಊಟವೆಂದರೆ ಊರು ಬಿಟ್ಟುಹೋದಂತೆ.
- ಎಲ್ಲ ಮುಗಿದ ಮೇಲೆ ತೀರ್ಥಯಾತ್ರೆಗೆ ಹೊರಟಂತೆ.
- ಒಗ್ಗಟ್ಟಿಲ್ಲದ ಊರಲ್ಲಿ ಒಪ್ಪತ್ತೂ ಇರಬೇಡ.
- ಒಕ್ಕಣ್ಣ ತನಗೆ ಹತ್ತು ಕಣ್ಣು ಅಂತಿದ್ನಂತೆ.
- ಕಣ್ಣಿಗೂ ಮೂಗಿಗೂ ಮೂರು ಗಾವುದ.
- ಕಲಹವೇ ಕೇಡಿಗೆ ಮೂಲ.
- ಮಾತಿಗೆ ಸಿಕ್ಕಿದರೆ ಮಳೆಗೆ ಸಿಕ್ಕಂತೆ.
- ನಾಲಿಗೆಯಿಂದ ಕೆಳಗೆ ಬಿದ್ದರೆ ನರಕ.
- ಮಾಡಿದ ರಾಗಿ ಕೊಟ್ರೂ ಮೂರ್ಖನ ಸಹವಾಸ ಬೇಡವೆಂದಂತೆ.
- ಲೋಕ ತಿಳೀಬೇಕು ಲೆಕ್ಕ ಕಲೀಬೇಕು.
- ಕುದುರೆ ಕುರುಡಾದರೂ ಕಡಿಮೆಯೇನೂ ತಿನ್ನುವುದಿಲ್ಲ!
- ದುರುಳನಿಂದಲೇ ದುರುಳುತನ.
- ಅಕಾಲದಲ್ಲಿ ಬೆಳೆಯಿದ್ದಂತೆ ವೃದ್ಧಾಪ್ಯದಲ್ಲಿ ಮಕ್ಕಳು.
- ನೆಂಟರನ್ನು ಲಕ್ಷಿಸದಿರಲು, ಸ್ನೇಹಿತರನ್ನು ಅಲಕ್ಷಿಸದಿರು.
- ಕಸದಲ್ಲಿ ಮಲಗಿ ಅರಮನೆ ಕನಸು ಕಂಡಂತೆ.
- ಮಧ್ಯಾಹ್ನದ ಊಟವಾದಮೇಲೆ ಮುಳ್ಳಿನ ಮೇಲಾದರೂ ಮಲಗು, ರಾತ್ರಿ ಊಟವಾದ ಮೇಲೆ ಅರ್ಧ ಮೈಲಿ ನಡೆ.
- ಹುಟ್ಟಿನಿಂದಲೇ ವಕ್ರವಾದದ್ದು, ಪೋಷಣೆಯ ಮೂಲಕ ಸರಿಯಾದಂತೆ.
- ಬಾವಿಯ ಬಾಯನ್ನು ಮುಚ್ಚಬಹುದು, ಜನಗಳ ಬಾಯನ್ನಲ್ಲ.
- ಆಳವಿಲ್ಲದ ನೀರು ಭಾರಿ ಶಬ್ದ ಮಾಡೀತು.
- ತನ್ನ ಯಂತ್ರಕ್ಕೆ ಎಣ್ಣೆ ಹಾಕಲೂ ಆಗದವ ಇನ್ನೊಬ್ಬರಿಗೆ ಉಪದೇಶ ನೀಡಿದಂತೆ.
- ಪಾದಕ್ಕೆ ತಕ್ಕಂತೆ ಚಪ್ಪಲಿ ತಗೊ, ಬಾಗಿಲಿನೆತ್ತರಕ್ಕೆ ತಕ್ಕಂತೆ ಬಗ್ಗಿ ನಡಿ.
- ಮನೆಯ ಕಷ್ಟಕ್ಕೆ ನೆರೆಮನೆಯವರು ಹೊಣೆ ಏನು?
- ಮನೆಯ ಬಾಗಿಲಿಗೆ ಬೀಗ ಹಾಕಿಕೋ, ಮನದ ಬಾಗಿಲನ್ನು ತೆರೆದಿಡು.
- ನಗುವೇ ಆರೋಗ್ಯದ ಗುಟ್ಟು.
- ಈರುಳ್ಳಿ, ಬೆಳ್ಳುಳ್ಳಿಯನ್ನು ತಿನ್ನು, ರೋಗವನ್ನು ದೂರವಿಡು.
- ಬೆಕ್ಕು ನಮ್ಮನೇದು, ಹಾಲು ಪಕ್ಕದ ಮನೇದು.
- ಕಹಿ ಪದಾರ್ಥ ತಿಂದು ಸಿಹಿ ಮಾತನಾಡು.
- ಮುಖ ನೋಡಿ ಮನ ತಿಳಿ.
- ಮಾತು ಚಿಕ್ಕದಾಗಿರಲಿ, ಕೆಲಸ ಚೊಕ್ಕವಾಗಿರಲಿ.
- ಮಾತು ಮೊಳದುದ್ದ, ಕೆಲಸ ಕಿರುಬೆರಳುದ್ದ.
- ಮನೆ, ಮನ ಓಡೆದರೆ ಅಂಟಿಸಲಾಗದ ಕನ್ನಡಿಯಂತೆ.
- ಕೋಪ ಕೆಲಸ ಕೆಡಿಸುತ್ತೆ, ಶಾಂತಿ ಮುಂದೆ ನಡೆಸುತ್ತೆ.
- ಮನುಜನಾಗಿ ಹುಟ್ಟಿ ಪಶುವಿನಂತೆ ಬದುಕಿದಂತೆ!
- ಕಳೆದ ದಿನಗಳು ಬರೆದ ಪುಟಗಳಂತೆ.
- ಪರಿಚಿತರ ಮರೆಯಬೇಡ, ಅಪರಿಚಿತರ ನಂಬಬೇಡ.
- ಹಲ್ಲಿಲ್ಲದಿದ್ದರೂ ಚಕ್ಕುಲಿ ತಿನ್ನೋ ಚಪಲ.
- ಒಗ್ಗಿದರೆ ಮನೆಯಾದರೇನು, ಸ್ಮಶಾನವಾದರೇನು?
- ಕೆಡುವವರು ಮನೇಲಿದ್ರು ಕೆಡುತ್ತಾರೆ.
- ನಮ್ಮಬುದ್ಧಿ ಪರರ ಕೈಯಲ್ಲಿದ್ದಂತೆ.
- ಮೆತ್ತಗಿದ್ರೆ ತುಳೀತಾರೆ, ಜೋರಾಗಿದ್ರೆ ಹೆದ್ರತಾರೆ.
- ನೋಡಿ ನಡೆದಾಗ ಎಡವೋದು ತಪ್ಪುತ್ತೆ.
- ತೀರ್ಥ ಎಂದು ಎಲ್ಲೆಲ್ಲೋ ನೀರು ಕುಡಿದಂತೆ!
- ಹಳೇ ಚಪ್ಪಲಿ ಆದ್ರೂ ಪರವಾಗಿಲ್ಲ, ಬರಿಗಾಲಲ್ಲಿ ನಡೀಬೇಡ.
- ರೈತನ ಮುಗ್ಗು ನಾಡಿನ ಕುಗ್ಗು.
- ದರಿದ್ರ ಏಳಗೊಡುವುದಿಲ್ಲ, ಆಲಸ್ಯ ಉಣಗೊಡುವುದಿಲ್ಲ.
- ನಾಚಿಕೆ ಬಿಟ್ಟವ ಊರಿಗೇ ದೊಡ್ಡವ.
- ಎರೆ-ತೆರೆ ಬಂಗಾರ, ಮರಳು ಬರೀ ಸಿಂಗಾರ!

- ಹತ್ತೋಕ್ ಮೊದ್ಲು ಕುದರೆ ನೋಡು, ಬಿತ್ತೊಕ್ ಮೊದ್ಲು ಹೊಲ ನೋಡು.
- ಚಿನ್ನದ ಸೂಜಿ ಅಂತ ಕಣ್ಣು ಚುಚ್ಚಿಕೊಂಡಾರೆ?
- ಟೊಳ್ಳು ಮಾತು ಸುಳ್ಳಿಗಿಂತ ಕಡೆ.
- ಠಕ್ಕು ಇರುವವನಿಗೆ ಠಿಕಾಣಿ ಸಿಗದು.
- ತೂಕ ಸರಿಯಿದ್ದರೆ ವ್ಯಾಪಾರ.
- ನಡೆದಷ್ಟು ನೆಲ, ಪಡೆದಷ್ಟು ಫಲ.
- ಮುಳ್ಳು ಬಿತ್ತಿದವನಿಗೆ ನೀನು ಹೂಬಿತ್ತು.
- ಪುಷ್ಪ ಡೊಂಕಾದರೇನು, ಪರಿಮಳ ಡೊಂಕೇ?
- ಬುದ್ಧಿಯಿಲ್ಲದವನ ಐಶ್ವರ್ಯ, ಕಡಿವಾಣ ಇಲ್ಲದ ಕುದುರೆಯಂತೆ.
- ರಸ್ತೇಲಿ ಕುತ್ಕೊಂಡು ಗಳಗಳನೆ ಅತ್ತರೆ ಹೋದ ಪ್ರಾಯ ಬಂದೀತೆ?
- ವೈರತ್ವ ನಾಶಕ್ಕೆ ವಾತ್ಸಲ್ಯವೇ ಮದ್ದು.
ಇತರೆ ಸಂಬಂದಿಸಿದ ವಿಷಯಗಳು
ಗಾದೆ ಮಾತುಗಳು ಕನ್ನಡದಲ್ಲಿ ವಿಸ್ತರಣೆ
ಮನಸ್ಸಿದ್ದರೆ ಮಾರ್ಗ ಗಾದೆ ಮಾತು ವಿವರಣೆ
ಕೃಷಿ ಹಾಗೂ ಮಳೆಗೆ ಸಂಬಂಧಿಸಿದ ಗಾದೆ ಮಾತುಗಳು
ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಗಾದೆ
ಇತರೆ ವಿಷಯಗಳು
- 10ನೇ ತರಗತಿ ಭಗತ್ಸಿಂಗ್ ಕನ್ನಡ ನೋಟ್ಸ್
- ಸರ್.ಎಂ. ವಿಶ್ವೇಶ್ವರಯ್ಯನವರ ಬಗ್ಗೆ
- ಭಾಗ್ಯಶಿಲ್ಪಿಗಳು ಪಾಠದ ಸಾರಾಂಶ
- 10ನೇ ತರಗತಿ ಯುದ್ಧ ಪಾಠದ ಸಾರಾಂಶ
- ಶಬರಿ ಪಾಠದ ಸಾರಾಂಶ ಕನ್ನಡ
- ಲಂಡನ್ ನಗರ ಪಾಠದ ಪ್ರಶ್ನೆ ಉತ್ತರಗಳು
- ಶಬರಿ ಪಾಠದ ಪ್ರಶ್ನೆ ಮತ್ತು ಉತ್ತರ
- 10ನೇ ತರಗತಿ ಕನ್ನಡ ಶಬರಿ ಪಾಠದ ಪ್ರಶ್ನೋತ್ತರಗಳು
- 10th ಹಸುರು ಪದ್ಯ ನೋಟ್ಸ್
Gangala hogidakke chombu kottu kani kelidarante.