Shivaratri Wishes in Kannada | ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು 2022

Shivaratri Wishes in Kannada | ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು 2022

Shivaratri Wishes in Kannada, ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು, maha shivaratri in kannada, shivaratri wishes in kannada, mahashivratri images

Shivaratri Wishes in Kannada

ಮಹಾಶಿವರಾತ್ರಿ… ಇದು ಹರನಿಗೆ ಅತೀ ನೆಚ್ಚಿನ ದಿನವಾಗಿದೆ . ಮಹಾಶಿವರಾತ್ರಿಯಂದು ಇಡೀ ರಾತ್ರಿ ಜಾಗರಣೆಯಲ್ಲಿದ್ದು ಶಿವನ ಧ್ಯಾನ ಗೈದರೆ ಮನಸ್ಸಿಗೂ ನೆಮ್ಮದಿ… ಪ್ರಸ್ತುತ ಎಲ್ಲೆಲ್ಲೂ ಈ ಹಬ್ಬದ ಸಂಭ್ರಮ ಮೇರೆ ಮೀರಿದೆ.. ಶಿವದೇವಾಲಯಗಳಂತೂ ಸಿಂಗಾರಗೊಂಡಿವೆ.

ಬದುಕಿನ ಕತ್ತಲೆಯನ್ನು ದೂರ ಮಾಡಿ ಸುಜ್ಞಾನವನ್ನು ಕರುಣಿಸುವ ಹಬ್ಬ ಇದಾಗಿದೆ. ಸಾಂಬಸದಾಶಿವ ಪಾರ್ವತಿ ಮಾತೆಯನ್ನು ವಿವಾಹವಾದ ದಿನ ಇದೆಂಬ ಉಲ್ಲೇಖವೂ ಇದೆ.

Happy Shivaratri in Kannada

ಶಿವ ನಿಷ್ಕಲ್ಮಶ, ಪ್ರಾಮಾಣಿಕ ಭಕ್ತಿಗೆ ಅತೀ ಬೇಗ ಒಲಿಯುವುದಾಗಿ ಭಕ್ತರ ನಂಬಿಕೆ. ಇದೇ ಕಾರಣಕ್ಕೆ ಜನ ಶಿವರಾತ್ರಿಯ ಸೂರ್ಯೋದಯದಿಂದ ಮರುದಿನದ ಸೂರ್ಯೋದಯದ ತನಕ ಪರಶಿವನ ಸ್ಮರಣೆ ಮಾಡುತ್ತಾರೆ. Happy Maha Shivaratri in Kannada

1314202 2

ಈ ಮೂಲಕ ಬದುಕಿನಲ್ಲಿ ನೆಮ್ಮದಿ ಕಾಣುತ್ತಾರೆ. ಜೊತೆಗೆ, ಇಡೀ ದಿನ ಉಪವಾಸದಿಂದಿದ್ದು ಶುಚಿರ್ಭೂತರಾಗಿ ಜನ ಶಿವದೇವಾಲಯಗಳಿಗೂ ಹೋಗಿ ಪ್ರಾರ್ಥನೆ ಸಲ್ಲಿಸುತ್ತಾರೆ. ಈ ದಿನ ನದಿಗಳಲ್ಲಿ ಸ್ನಾನ ಮಾಡುವ ಸಂಪ್ರದಾಯವೂ ಇದೆ.

Shivaratri in Kannada

ಜಾಗರಣೆ

ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದು. ಈ ಹಬ್ಬವನ್ನು ಮಾಘ ಮಾಸದ ಬಹುಳ ಚತುರ್ದಶಿಯಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಫೆಬ್ರುವರಿ ಅಥವಾ ಮಾರ್ಚ್ ತಿಂಗಳಿನಲ್ಲಿ ಶಿವರಾತ್ರಿ ಹಬ್ಬ ಬರುತ್ತದೆ.

ಇಡೀ ದಿನ ಉಪವಾಸ, ಜಾಗರಣೆಗಳನ್ನು ಮಾಡಿ,4 ಯಾಮಗಳಲ್ಲೂ ಶಿವ ಪೂಜೆಯನ್ನು ಮಾಡುವ ಮೂಲಕ ಆಚರಿಸಲಾಗುತ್ತದೆ.ಇದರ ಮುಂದಿನ ದಿನ ವಿವಿಧ ರೀತಿಯ ಸಿಹಿ ತಿನಿಸುಗಳನ್ನು ತಯಾರಿಸುವರು.ತಂಬಿಟ್ಟು ಈ ಹಬ್ಬದ ಪ್ರಮುಖ ತಿನಿಸು.

ಹಬ್ಬದ ವಿಶೇಷ ಆಚರಣೆ:

ಕಾಶಿ ವಿಶ್ವನಾಥ, ಗೋಕರ್ಣದ ಮಹಾಬಲೇಶ್ವರ, ರಾಮೇಶ್ವರದ ರಾಮೇಶ್ವರ ಸೇರಿದಂತೆ ರಾಜ್ಯ, ದೇಶ, ವಿದೇಶಗಳ ಶಿವದೇವಾಲಯಗಳಲ್ಲಿ ಅಂದು ವಿಶೇಷ ಪೂಜೆ ನಡೆಯುತ್ತದೆ. ಬಿಲ್ವಾರ್ಚನೆ, ರುದ್ರಾಭಿಷೇಕ, ಶಿವನಾಮ ಧ್ಯಾನಗಳ ಮೂಲಕ ಶಿವನನ್ನು ಆರಾಸಲಾಗುತ್ತದೆ. ಇಡೀ ರಾತ್ರಿ ಶಿವದೇವಾಲಯಗಳಲ್ಲಿ ರುದ್ರಪಠಣದ ಜೊತೆ ಜಾಗರಣೆ ನಡೆಯುತ್ತದೆ.

happy mahashivratri images

ಶಿವರಾತ್ರಿಯಂದು ಬೆಳಗ್ಗೆ ಬೇಗನೆ ಏಳುವ ಭಕ್ತರು, ಸ್ವಾನ ಮಾಡಿ, ಶುಚಿರ್ಭೂತರಾಗಿ ಶಿವದೇವಾಲಯಕ್ಕೆ ತೆರಳುತ್ತಾರೆ. ಕೆಲವರು ಕೈಲಾಸಯಂತ್ರ ರಚಿಸಿ, ಮನೆಯಲ್ಲಿಯೇ ಶಿವನಿಗೆ ವಿಶೇಷ ಪೂಜೆ ನಡೆಸುತ್ತಾರೆ. ಗಂಗಾ, ಬ್ರಹ್ಮಪುತ್ರ, ಕೃಷ್ಣ, ಕಾವೇರಿ, ತ್ರಿವೇಣಿ ಸಂಗಮ ಸೇರಿದಂತೆ ಪುಣ್ಯನದಿಗಳಲ್ಲಿ ಭಕ್ತರು ಸ್ನಾನ ಮಾಡುತ್ತಾರೆ.

shiv ratri image

ಕೆಲವರು ಹಾಲು, ಹಣ್ಣು ಸೇವಿಸಿ ಲಘು ಉಪಹಾರ ಸೇವಿಸಿದರೆ, ಕೆಲವು ಭಕ್ತರು ದಿನವಿಡಿ ಏನನ್ನೂ ತಿನ್ನದೆ, ನೀರನ್ನೂ ಕುಡಿಯದೆ ಉಪವಾಸ ಇರುತ್ತಾರೆ. ಭಸ್ಮ ಲೇಪಿಸಿಕೊಂಡು, ಬಿಲ್ವಾರ್ಚನೆ ಮೂಲಕ ರುದ್ರ ಪಠಣ ಹಬ್ಬದ ಆಚರಣೆಯ ವಿಶೇಷ.

happy maha shivratri wishes

ಅಭಿಷೇಕಪ್ರಿಯ ಎಂದೇ ಖ್ಯಾತನಾದ ಶಿವನಿಗೆ ದಿನವಿಡಿ ಹಾಲು, ಜೇನುತುಪ್ಪ ಹಾಗೂ ನೀರಿನ ಅಭಿಷೇಕ ನಡೆಯುತ್ತದೆ. ಪ್ರತಿ ೩ ಗಂಟೆಗೊಮ್ಮೆ ಶಿವಲಿಂಗಕ್ಕೆ ಅಭಿಷೇಕ ಮಾಡಲಾಗುತ್ತದೆ.

ಬಿಲ್ವಪತ್ರೆ, ತುಳಸಿ, ಶ್ರೀ ಗಂಧ, ಹಾಲು, ಜೇನುತುಪ್ಪಗಳಿಂದ ಅಭಿಷೇಕ ನಡೆಯುತ್ತದೆ. ಶಿವ ಪಂಚಾಕ್ಷರಿ ಮಂತ್ರ “ಓಂ ನಮ: ಶಿವಾಯ”, ಹರ ಹರ ಮಹಾದೇವ, ಶಂಭೋ ಶಂಕರ…ಶಿವದೇವಾಲಯಗಳಲ್ಲಿ ಮಾರ್ದನಿಸುತ್ತದೆ.

ನಾಲ್ಕು ಆಯಾಮಗಳ ರುದ್ರಪಠಣ, ಶಿವರಾತ್ರಿ ಪೂಜೆಯ ವಿಶೇಷ. ಶಿವಪುರಾಣದ ಪ್ರಕಾರ ರುದ್ರ ಹಾಗೂ ಚಮೆಗಳ ಪಠಣ ಶಿವನಿಗೆ ಅಚ್ಚುಮೆಚ್ಚು. ದೇವಾಲಯಗಳಲ್ಲಿ ಸಂಜೆ ೬ ಗಂಟೆಯಿಂದ ಮೊದಲ್ಗೊಂಡು ಮುಂಜಾನೆ ೬ ಗಂಟೆಯವರೆಗೆ ರುದ್ರಪಠಣದ ಮೂಲಕ ಶಿವ ಸ್ತುತಿ, ಜಾಗರಣೆ ನಡೆಯುತ್ತದೆ.

ಪ್ರತಿ 3 ಗಂಟೆಗೊಮ್ಮೆ ಮಂಗಳಾರತಿ ಮಾಡಲಾಗುತ್ತದೆ. ಬೆಳಗ್ಗೆ 6 ಗಂಟೆಗೆ ಮಹಾಮಂಗಳಾರತಿ ಆಚರಣೆ ಮೂಲಕ ಜಾಗರಣೆ ಮುಕ್ತಾಯಗೊಳ್ಳುತ್ತದೆ.

happy mahashivratri status

ಮೊದಲನೆಯ ಆಯಾಮದಲ್ಲಿ ಹಾಲು, ಎರಡನೆಯ ಆಯಾಮದಲ್ಲಿ ಮೊಸರು, ಮೂರನೆಯ ಆಯಾಮದಲ್ಲಿ ತುಪ್ಪ ಹಾಗೂ ನಾಲ್ಕನೆಯ ಆಯಾಮದಲ್ಲಿ ಜೇನುತುಪ್ಪಗಳಿಂದ ಶಿವನಿಗೆ ಅಭಿಷೇಕ ಮಾಡುವ ಪದ್ಧತಿಯೂ ಕೆಲವೆಡೆ ಇದೆ.

ಶಿವರಾತ್ರಿಯ ಮಹಿಮೆ

ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ.

ಶಿವ-ಪಾರ್ವತಿಯರ ವಿವಾಹ ಮಹೋತ್ಸವದ ದಿನವಿದು ಎಂಬುದು ವಿಶೇಷ. ಹಿಮವಂತನ ಮಗಳು

mahashivratri images 2022

ಪಾರ್ವತಿ ಈ ದಿನದಂದು ರಾತ್ರಿಯಿಡಿ ಶಿವನಾಮ ಪಠಿಸುತ್ತಾ, ತಪಸ್ಸು ಮಾಡಿ, ಶಿವನನ್ನು ಮೆಚ್ಚಿಸಿ, ವಿವಾಹವಾದಳೆಂಬುದು ಪ್ರತೀತಿ. ಶಿವ ರುದ್ರತಾಂಡವನಾಡಿದ ರಾತ್ರಿಯೂ ಇಂದೇ ಎನ್ನಲಾಗುತ್ತದೆ.

ದೇವತೆಗಳು ಹಾಗೂ ಅಸುರರ ನಡುವೆ ಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ, ಅದನ್ನು ಶಿವ ಕುಡಿದ.

ವಿಷ ಗಂಟಲೊಳಗಿಂದ ಇಳಿಯದಂತೆ ಪಾರ್ವತಿ ಇಡೀ ರಾತ್ರಿ ತಡೆದಳು ಎನ್ನುತ್ತದೆ ಶಿವಪುರಾಣದ ಇನ್ನೊಂದು ಮಹಿಮೆ. ಹಾಗಾಗಿ, ಭಕ್ತರು ಇಡೀ ರಾತ್ರಿ ಎಚ್ಚರವಿದ್ದು, ನೀಲಕಂಠನನ್ನು ಸ್ತುತಿಸುತ್ತಾರೆ.

ಭಗೀರಥನ ತಪಸ್ಸಿಗೆ ಮೆಚ್ಚಿ ಇಳೆಗೆ ಇಳಿದು ಬಂದ ಗಂಗೆಯನ್ನು ಶಿವ ತನ್ನ ಜಡೆಯಲ್ಲಿ ತುಂಬಿಸಿಕೊಂಡಿದ್ದ. ಇದರಿಂದ ವಿಚಲಿತನಾದ ಭಗೀರಥ ಗಂಗೆಯನ್ನು ಭೂಮಿಗೆ ಹರಿಸುವಂತೆ ಶಿವನನ್ನು ಪ್ರಾರ್ಥಿಸಿದ.

ಆತನ ಭಕ್ತಿಗೆ ಮೆಚ್ಚಿ ಶಿವ ಗಂಗೆಯನ್ನು ಹರಿಯಬಿಟ್ಟಿದ್ದು ಇದೇ ದಿನ ಎನ್ನುತ್ತದೆ ಪುರಾಣ.

happy mahashivratri 2022

ಲಿಂಗಪುರಾಣದ ಪ್ರಕಾರ, ಲಿಂಗ ರೂಪಿಯಾಗಿ ಭಕ್ತರಿಗೆ ಅನುಗ್ರಹ ನೀಡಿದ ದಿನವಿದು.

ಶಿವನ ಆದಿ ಮತ್ತು ಅಂತ್ಯ ಹುಡುಕಲು ಹೊರಟ ವಿಷ್ಣು ಹಾಗೂ ಬ್ರಹ್ಮನಿಗೆ, ಶಿವರಾತ್ರಿಯಂದು ಶಿವ ಲಿಂಗರೂಪಿಯಾಗಿ ದರ್ಶನ ನೀಡಿದ ಎಂಬುದು ಪ್ರತೀತಿ. ಇದು ಸ್ಕಂದ ಪುರಾಣ ಒಂದು ಭಾಗ

ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು

ಶಿವನಾಮ ಸ್ಮರಣೆಯಿಂದ ನಿಮ್ಮ ಬದುಕು ಹಸನಾಗಲಿ. ಬದುಕಿನಲ್ಲಿ ಯಶಸ್ಸು ಲಭಿಸಲಿ. ನಿಮ್ಮ ಸಾಧನೆಯ ಅನನ್ಯ ಕನಸಿಗೆ, ಪ್ರಾಮಾಣಿಕ ಪ್ರಯತ್ನಕ್ಕೆ ಸದಾ ದೇವರ ಅನುಗ್ರಹವಿರಲಿ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಶಿವರಾತ್ರಿಯ ಶುಭಾಶಯಗಳು

Shivaratri Wishes in Kannada | ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು 2022

ನಿಮಗೆಲ್ಲರಿಗೂ ಮಹಾಶಿವರಾತ್ರಿಯ ಶುಭಾಶಯಗಳು. ಶಿವ ಮತ್ತು ದೇವಿ ಪಾರ್ವತಿ ಎಲ್ಲರನ್ನೂ ಹರಸಲಿ. ಈ ಹಬ್ಬ ಪ್ರತಿಯೊಬ್ಬರಿಗೂ ಖುಷಿಯನ್ನೇ ತರಲಿ. ನಿಮ್ಮ ಸಕಲ ಇಷ್ಟಾರ್ಥಗಳು ಕೈಗೂಡಲಿ. ಓಂ ನಮಃ ಶಿವಾಯ

mahashivratri 2021 photo

Shivaratri Wishes in Kannada | ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು 2022

ಪರಶಿವನ ಮಹಿಮೆ ಅಪಾರ. ಎಲ್ಲರ ಮೇಲಿರಲಿ ಪರಮೇಶ್ವರನ ಆಶೀರ್ವಾದ. ಸರ್ವರನ್ನೂ ಅನುಗ್ರಹಿಸಲಿ ಈಶ್ವರ. ನಾಡಿನ ಜನತೆಗೆ ಮಹಾಶಿವರಾತ್ರಿಯ ಹಾರ್ದಿಕ ಶುಭಾಶಯಗಳು

Shivaratri Wishes in Kannada | ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು 2022

ನಿಮ್ಮ ಪ್ರಾರ್ಥನೆಗಳಿಗೆ ಶಿವ ಪಾರ್ವತಿ ಅಸ್ತು ಎನ್ನಲಿ. ಶಾಶ್ವತವಾದ ಸುಖ, ನೆಮ್ಮದಿ ನಿಮ್ಮದಾಗಲಿ. ಶಿವನಾಮ ಸ್ಮರಣೆಯ ಪುಣ್ಯಫಲವೆಲ್ಲಾ ನಿಮಗೆ ಲಭಿಸಲಿ. ತಮಗೂ ತಮ್ಮ ಕುಟುಂಬಕ್ಕೂ ಶಿವರಾತ್ರಿಯ ಹಾರ್ದಿಕ ಶುಭಾಶಯಗಳು

Shivaratri Wishes in Kannada | ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು 2022

ವಿಷಕಂಠನ ದಯೆಯಿಂದ ಕಷ್ಟಗಳೆಂಬ ವಿಷವೆಲ್ಲಾ ಸುಖ, ಶಾಂತಿ, ನೆಮ್ಮದಿಯೆಂಬ ಅಮೃತವಾಗಿ ಪರಿವರ್ತನೆಯಾಗಲಿ. ಪರಶಿವನ ಧ್ಯಾನದಿಂದ ಮನ, ಮನೆಗಳಲ್ಲಿ ಖುಷಿಯ ಹೂವು ಚೆಲ್ಲಲಿ. ಸರ್ವರಿಗೂ ಶಿವರಾತ್ರಿಯ ಶುಭಾಶಯಗಳು

Shivaratri Wishes in Kannada | ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು 2022

ಈ ಮಹಾಶಿವರಾತ್ರಿಯಂದು ಶಿವನು ನಿಮ್ಮ ಎಲ್ಲಾ ದುಃಖವನ್ನು ನಾಶ ಮಾಡಲಿ ಮತ್ತು ಸಂತೋಷದಾಯಕ ಮತ್ತು ಆರೋಗ್ಯಕರ ಜೀವನ ನಿಮ್ಮದಾಗಲಿ. ಓಂ ನಮಃ ಶಿವಾಯ. ಸರ್ವರಿಗೂ ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು

1314202 Copy 7

ನಿಮ್ಮ ಜೀವನದ ಕನಸನ್ನು ಈಡೇರಿಸಲು, ಯಶಸ್ಸಿನ ಹಾದಿಯಲ್ಲಿರುವ ಅಡೆತಡೆಗಳನ್ನು ಧೈರ್ಯದಿಂದ ಎದುರಿಸುವ ಶಕ್ತಿಯನ್ನು ದೇವರು ನಿಮಗೆ ಕರುಣಿಸಲಿ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಮಹಾಶಿವರಾತ್ರಿಯ ಶುಭಾಶಯಗಳು

1314202 Copy 8

ಮಹಾಶಿವರಾತ್ರಿಯ ಶುಭಾಶಯಗಳು. ಕರುಣಾಮಯಿ ಭಗವಂತನು ನಿಮ್ಮ ಕುಟುಂಬದ ಮೇಲೆ ಆಶೀರ್ವಾದದ ಮಳೆ ಸುರಿಸಲಿ, ನಿಮಗೆ ಸಂತೋಷ, ಸಮೃದ್ಧಿ ಕರುಣಿಸಲಿ. ಓಂ ನಮಃ ಶಿವಾಯ

1314202 Copy

ಶಿವನ ಆಶೀರ್ವಾದದ ಪ್ರಭೆ, ದೇವಿ ಪಾರ್ವತಿಯ ಕಾರುಣ್ಯದ ದೃಷ್ಟಿ ಎಲ್ಲರಿಗೂ ಸನ್ಮಂಗಳವನ್ನುಂಟು ಮಾಡಲಿ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಮಹಾಶಿವರಾತ್ರಿಯ ಶುಭಾಶಯಗಳು

Shivaratri Wishes in Kannada

1628438820 lord shiva pic

ಪ್ರಬಂಧಗಳ ಪಟ್ಟಿ

ಇತರೆ ವಿಷಯಗಳನ್ನು ಓದಲು ಈ ಕೆಳಗೆ ಕಾಣಿಸುವ ವಿಷಯದಮೇಲೆ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *